11:20 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಪಾಲಿಕೆಯ ತೆರವು ಕಾರ್ಯಾಚರಣೆ: ಬೀದಿ ಬದಿ ವ್ಯಾಪಾರಿಗಳಿಂದ ಮನಪಾ ಆಯುಕ್ತರ, ಆರೋಗ್ಯ ಅಧಿಕಾರಿಗಳ ಕಚೇರಿಗೆ ಮುತ್ತಿಗೆ

23/02/2023, 21:54

ಮಂಗಳೂರು(reporterkarnataka.com): ನಗರದ ಲಾಲ್ ಭಾಗ್ ಸಮೀಪದ ಮಂಗಳಾ ಕ್ರೀಡಾಂಗಣ ಹಾಗೂ ಲೇಡಿಹಿಲ್ ಸುತ್ತಮುತ್ತಿಲಿನ ಬೀದಿಬದಿ ಆಹಾರ ಮಾರಾಟ ಮಾಡುವ ಬಡ ಬೀದಿ ವ್ಯಾಪಾರಿಗಳ ಮೇಲೆ ಕಾರ್ಯಾಚರಣೆ ನಡೆಸಿ ಅವರ ಆಹಾರದ ಸಾಮಗ್ರಿಗಳನ್ನು ವಶಪಡಿಸಿಕೊಂಡ ನಗರಪಾಲಿಕೆಯ ಆರೋಗ್ಯ ವಿಭಾಗದ ನೀತಿಯ ವಿರುದ್ಧ ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ನೇತೃತ್ವದಲ್ಲಿ ಗುರುವಾರ ಪಾಲಿಕೆಯ ಆಯುಕ್ತರ ಕಚೇರಿ ಹಾಗೂ ಆರೋಗ್ಯಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಪಾಲಿಕೆಯ ಕಾನೂನು ಬಾಹಿರ ಕಾರ್ಯಚರಣೆಯನ್ನು ಖಂಡಿಸಿ ವಶಪಡಿಸಲಾದ ಸೊತ್ತುಗಳನ್ನು ವಾಪಸ್ ನೀಡುವಂತೆ ಒತ್ತಾಯಿಸಿದರು.


ಹೋರಾಟದಲ್ಲಿ ಸಂಘದ ಗೌರವಾಧ್ಯಕ್ಷ ಬಿ.ಕೆ ಇಮ್ತಿಯಾಝ್, ಅಧ್ಯಕ್ಷ ಮೊಹಮ್ಮದ್ ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಖಜಾಂಜಿ ಆಸೀಫ್ ಬಾವ ಉರುಮನೆ, ಮುಖಂಡರಾದ ಆನಂದ ಲೇಡಿಹಿಲ್, ಖಾಜಾ ಮೋಹಿಯುದ್ದಿನ್, ಗಜಾನನ ಕಂಕನಾಡಿ, ಗೋಪಾಲ್ ವೆಲೆನ್ಸಿಯ, ಆಸೀಫ್ ಇಕ್ಬಾಲ್ ಲೇಡಿಹಿಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು