3:02 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಪಾಲಿಕೆಯ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆ ಶಾಸಕ ಡಾ. ಭರತ್ ಶೆಟ್ಟಿ ಸಭೆ: ಕಡಲ್ಕೊರೆತ, ಪ್ರಕೃತಿ ವಿಕೋಪ ಬಗ್ಗೆ ಎಚ್ಚರ ವಹಿಸಲು ಸೂಚನೆ

25/05/2023, 19:09

ಮಂಗಳೂರು(reporterkarnataka.com): ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ನಗರದ ಲಾಲ್ ಬಾಗ್ ನಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಚೇರಿಯ ಮಂಗಳಾ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮುಂಬರುವ ಮಳೆಗಾಲದಲ್ಲಿ ನಡೆಯಬಹುದಾದ ಪ್ರಕೃತಿ ವಿಕೋಪ ಮತ್ತು ಹಾನಿಗಳನ್ನು ಸಮರ್ಥವಾಗಿ ಎದುರಿಸುವ ಬಗ್ಗೆ, ಕಡಲ್ ಕೊರೆತ ತಡೆಗಟ್ಟುವಿಕೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಸಭೆಯಲ್ಲಿ ಮೇಯರ್ ಜಯಾನಂದ ಅಂಚನ್, ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಬಿ. ಪಾಟೀಲ್, ಮಂಗಳೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಮಹೇಶ ಹೊಳ್ಳ, ಪಾಲಿಕೆ ಆಯುಕ್ತರಾದ ಶ್ರೀ ಚನ್ನ ಬಸಪ್ಪ, ಮ. ನ. ಪಾ ಸದಸ್ಯರುಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರುಗಳು, ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು, ಇಂಜಿನಿಯರ್ ಗಳು, ಅರಣ್ಯ ಇಲಾಖೆ , ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು