1:11 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಪಳ್ಳಿ ಪಂಚಾಯತ್‌ನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ; ಓದುವ ಹವ್ಯಾಸ ಹೆಚ್ಚಾಗಲಿ: ಸಚಿವ ಸುನಿಲ್ ಕುಮಾರ್

19/10/2022, 12:30

ಕಾರ್ಕಳ(reporterkarnataka.com): ಉತ್ತಮ ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸ ಹೆಚ್ಚಾಗಬೇಕು. ಇದರಿಂದ ಜ್ಞಾನ ವೃದ್ಧಿಯಾಗುತ್ತದೆ. ಮಕ್ಕಳಿಗೆ ಪುಸ್ತಕಗಳನ್ನು ಓದುವಂತೆ ಪ್ರೇರೇಪಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಅವರು ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಡಿಜಿ ವಿಕಸನ , ಡೆಲ್ ಮತ್ತು ಶಿಕ್ಷಣ ಫೌಂಡೇಶನ್ ವತಿಯಿಂದ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಮಾಜದ ಪ್ರತಿಯೊಂದು ಕ್ಷೇತ್ರಗಳಲ್ಲಿ ಡಿಜಿಟಲೀಕರಣ ವ್ಯವಸ್ಥೆ ಅಳವಡಿಕೆಯಾಗುತ್ತಿದ್ದು, ಮಹತ್ತರವಾದ ಬೆಳವಣಿಗೆಯಾಗುತ್ತಿದೆ. ಪಳ್ಳಿ ಗ್ರಾಮ ಪಂಚಾಯತ್‌ನ ಗ್ರಂಥಾಲಯ ಕೂಡ ಡಿಜಿಟಲೀಕರಣವಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದವರು ಹೇಳಿದರು.

ಪಂಚಾಯತ್ ಅಧ್ಯಕ್ಷ ಸಂದೀಪ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಣ ಫೌಂಡೇಷನ್‌ನ ಸಂಯೋಜಕಿ ರೀನಾ ಹೆಗ್ಡೆ ಅವರು ಡಿಜಿಟಲ್ ಗ್ರಂಥಾಲಯದ ಬಗ್ಗೆ ಮಾಹಿತಿ ನೀಡಿದರು.
ಗ್ರಂಥಾಲಯದ ಮೇಲ್ವಿಚಾರಕಿ ಸುಷ್ಮಾ ನಾಯಕ್ ಮಾತನಾಡಿ, ಗ್ರಾಮ ಪಂಚಾಯತ್‌ನಿಂದ ಸಾರ್ವಜನಿಕರಿಗೆ ಹೆಚ್ಚಿನ ಪ್ರಯೋಜನವಾಗುವಂತೆ ಒತ್ತು ನೀಡಲಾಗಿದೆ. ಪಂಚಾಯತ್‌ನ ೧೨ ರಿಂದ ೬೦ ವರ್ಷದ ವರೆಗಿನ ಸಾರ್ವಜನಿಕರಿಗೆ ಕಂಪ್ಯೂಟರ್, ಇಂಟರ್ನೆಟ್, ಬ್ಯಾಂಕ್ ವಹಿವಾಟು, ವೃತ್ತಿ ಮಾರ್ಗದರ್ಶನ, ಸಂವಹನ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಪ್ರತೀ ಭಾನುವಾರ ಪೂರ್ವಾಹ್ನ ೧೦ ರಿಂದ ೧೨ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಯೋನಾಧಿಕಾರಿ ಬಾಬು, ಪಂಚಾಯತ್ ಉಪಾಧ್ಯಕ್ಷ ಲಕ್ಷ್ಮಿ ಶೆಟ್ಟಿ, ಪಿಡಿಒ ಪ್ರಮೀಳಾ ನಾಯಕ್, ಪಂಚಾಯತ್‌ನ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಗ್ರಂಥಾಲಯದ ಶಿಕ್ಷಕಿ ಚೈತ್ರಾ ಸ್ವಾಗತಿಸಿ, ವಿಜಯಲಕ್ಷ್ಮೀ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು