5:26 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಬಹಿರಂಗ ಪ್ರಚಾರಕ್ಕೆ ಚುನಾವಣಾ ಆಯೋಗ ಬ್ರೇಕ್ ; ಮಾರ್ಚ್ 10ರಂದು ಮತ ಎಣಿಕೆ

08/01/2022, 16:49

ಹೊಸದಿಲ್ಲಿ(reporterkarnataka.com):

ಬಹು ನಿರೀಕ್ಷೆಯ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ, ಮಣಿಪುರ ರಾಜ್ಯಗಳ ವಿಧಾನ ಸಭಾ ಚುನಾವಣೆ ನಡೆಯಲಿದೆ.

5 ರಾಜ್ಯಗಳ ಒಟ್ಟು18.34 ಕೋಟಿ ಮತದಾರರು ಮತದಾನ ಚಲಾಯಿಸಲಿದ್ದಾರೆ.

ದೆಹಲಿಯಲ್ಲಿ ಇಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು 5 ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದಾರೆ.

ದೇಶದಲ್ಲೇ ಅತೀ ದೊಡ್ಡ ರಾಜ್ಯ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಉತ್ತರ ಪ್ರದೇಶದ 403 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಉತ್ತರಾಖಂಡ್ 70, ಗೋವಾ 40, ಮಣಿಪುರ 60, ಪಂಜಾಬ್ 117 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಒಟ್ಟು 5 ರಾಜ್ಯಗಳ 690 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು18.34 ಕೋಟಿ ಮತದಾರರು ಈ ಬಾರಿ ಮತ ಚಲಾಯಿಸಲಿದ್ದಾರೆ. ಕೊರೊನಾ ನಿಯಮಗಳನ್ನು ಪಾಲಿಸಿ ಮತದಾನ ಪ್ರಕ್ರಿಯೆ ನಡೆಸುತ್ತಿದ್ದೇವೆ ಎಂದು ವಿವರಣೆ ನೀಡಿದರು.

5 ರಾಜ್ಯಗಳಲ್ಲಿ ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗಲಿದೆ. ಈ ಬಾರಿ ಚುನಾವಣಾ ವೆಚ್ಚವನ್ನು 28 ಲಕ್ಷದಿಂದ 40 ಲಕ್ಷಗಳಿಗೆ ಏರಿಕೆ ಮಾಡಲಾಗಿದೆ. ಯಾವುದೇ ಪಕ್ಷಗಳು ಕ್ರಿಮಿನಲ್ ಹಿನ್ನಲೆಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಆಯಾ ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ವಿವರಣೆ ನೀಡಬೇಕಾಗಿದೆ.

ಈ ರಾಜ್ಯಗಳಲ್ಲಿ ಈ ಬಾರಿ ಬಹಿರಂಗ ಪ್ರಚಾರಕ್ಕೆ ಚುನಾವಣಾ ಆಯೋಗ ಸಂಪೂರ್ಣವಾಗಿ ಬ್ರೇಕ್ ಹಾಕಿದೆ. ಪಾದಯಾತ್ರೆ, ರೋಡ್ ಶೋ, ಬೈಕ್ ರ್ಯಾಲಿಯನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ.

ಉತ್ತರ ಪ್ರದೇಶದಲ್ಲಿ 7ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 10, 14, 20, 23, 27, ಮಾರ್ಚ್ 3, 7 ರಂದು ಚುನಾವಣೆ ನಡೆಯಲಿದೆ.

ಮಣಿಪುರದಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 27 ರಂದು ಮೊದಲ ಹಂತದ ಮತದಾನ ನಡೆದರೆ ಮಾರ್ಚ್ 3 ರಂದು ಎರಡನೇ ಹಾಗೂ ಅಂತಿಮ ಹಂತದ ಮತದಾನ ನಡೆಯಲಿದೆ .

ಗೋವಾ, ಉತ್ತರಾಖಂಡ್, ಪಂಜಾಬ್ ನಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಈ ಎಲ್ಲ ರಾಜ್ಯಗಳ ಮತ ಎಣಿಕೆ ಮಾರ್ಚ್ 10 ರಂದು ಘೋಷಣೆಯಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು