6:18 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆ: ಕಾಂಗ್ರೆಸ್ ಗೆ ಮತ್ತೆ ಹೀನಾಯ ಸೋಲು: 3 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ; ಗೋವಾ ಅತಂತ್ರ 

10/03/2022, 11:40

ಹೊಸದಿಲ್ಲಿ(reporterkarnataka.com): ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಐದು ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಈ ಬಾರಿಯೂ ಕಾಂಗ್ರೆಸ್ ಗೋವಾ ಹೊರತುಪಡಿಸಿ ಇತರ ಕಡೆಗಳಲ್ಲಿ pಹೀನಾಯ ಸೋಲು ಅನುಭವಿಸಿದೆ.

ಉತ್ತರ ಪ್ರದೇಶ, ಉತ್ತರಾಖಂಡ್ ನಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಮಣಿಪುರದಲ್ಲಿ ಸರಳ ಬಹುಮತ ಪಡೆದಿದೆ. ಗೋವಾದಲ್ಲಿ ಅತೀ ದೊಡ್ಡ ಪಕ್ಷವಾಗಿ ಮೂಡಿ ಬಂದರೂ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಗೋವಾದ 40 ಸ್ಥಾನಗಳ ಪೈಕಿ ಬಿಜೆಪಿ 17, ಕಾಂಗ್ರೆಸ್ 16, ಎಎಪಿ 2 ಮತ್ತು ಇತರರು 3 ಸ್ಥಾನಗಳನ್ನು ಪಡೆದಿದ್ದಾರೆ. ಇಲ್ಲಿ ಸರಕಾರ ರಚನೆ ಇತರರನ್ನು ಅವಲಂಬಿಸಿದೆ.

ಉತ್ತರಾಖಂಡ್ ನ 70 ಸ್ಥಾನಗಳ ಪೈಕಿ ಬಿಜೆಪಿ 44 ಸ್ಥಾನಗಳನ್ನು ಬಾಚಿಕೊಂಡಿದೆ. ಕಾಂಗ್ರೆಸ್ 21 ಹಾಗೂ ಇತರರು 5 ಸ್ಥಾನಗಳನ್ನು ಪಡೆದಿದ್ದಾರೆ. ಪಂಜಾಬ್ ನಲ್ಲಿ 117 ಸ್ಥಾನಗಳ ಪೈಕಿ ಆಮ್ ಆದ್ಮಿ ಪಾರ್ಟಿ 85 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ದಾಖಲಿಸಿದೆ. ಕಾಂಗ್ರೆಸ್ 16, ಬಿಜೆಪಿ 6 ಮತ್ತು ಎಸ್ ಎಡಿ 9 ಸ್ಥಾನಗಳನ್ನು ಪಡೆದಿದೆ. ಮಣಿಪುರದ 60 ಸ್ಥಾನಗಳ ಪೈಕಿ 44 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಬಿಜೆಪಿ 21, ಎನ್ ಪಿಪಿಇ 8, ಎನ್ ಪಿಎಫ್ 4ಮತ್ತು ಇತರರು 6 ಸ್ಥಾನಗಳನ್ನು ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು