9:34 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆ ಫಲಿತಾಂಶ ಕಾಂಗ್ರೆಸ್ ಶವಪೆಟ್ಟಿಗೆಯ ಕೊನೆಯ ಮೊಳೆ: ಶಾಸಕ ವೇದವ್ಯಾಸ ಕಾಮತ್

10/03/2022, 16:02

ಮಂಗಳೂರು(reporterkarnataka.com): ಪಂಚ‌ ರಾಜ್ಯ ಚುನಾವಣೆಯ ಫಲಿತಾಂಶವು ಬಿಜೆಪಿಯ ಅಭಿವೃದ್ಧಿ, ಸಧೃಢ ನಾಯಕತ್ವಕ್ಕೆ ಸಂದ ಗೆಲುವು. ಪಂಜಾಬ್ ಹೊರತುಪಡಿಸಿ ಉಳಿದ 4 ರಾಜ್ಯಗಳಲ್ಲಿ ಬಿಜೆಪಿ ಮತ್ತೆ ಆಡಳಿತಕ್ಕೇರುವ ಮೂಲಕ ದೇಶದ ಜನರಿಗೆ ಬಿಜೆಪಿಯ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ ಎನ್ನುವುದು ಸಾಬೀತಾಗಿದೆ ಎಂದು ಶಾಸಕ‌ ಕಾಮತ್ ಹೇಳಿದ್ದಾರೆ. 

4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ಮೂಲಕ ಜನಾಶೀರ್ವಾದ ಪಡೆದಿದೆ. ಅವ್ಯಾಹತವಾಗಿ ಅಪಪ್ರಚಾರ ಮಾಡಿದ ಕಾಂಗ್ರೆಸ್ ಪಕ್ಷವು ಜನರಿಂದ ತಿರಸ್ಕೃತಗೊಂಡು ಮೂಲೆ ಗುಂಪಾಗಿದೆ. ಈ ಪಂಚ ರಾಜ್ಯ ಚುನಾವಣೆಯಲ್ಲಿ ಜನತೆ ಕಾಂಗ್ರೇಸ್ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆದಿದ್ದಾರೆ ಎಂದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಮೆಚ್ಚಿ ಮತ ನೀಡಿದ ಪ್ರತಿಯೊಬ್ಬ ಮತದಾರ ಪ್ರಭುವಿಗೂ ಧನ್ಯವಾದಗಳು ಹಾಗೂ ಗೆದ್ದು ಜನರ ಸೇವೆಗೆ ಆಯ್ಕೆಯಾದ ಎಲ್ಲಾ ಶಾಸಕರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು