8:32 AM Sunday24 - November 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ… ಫೆಸ್ಟಿವಲ್ ಆಫ್ ಆಸ್ಟ್ರೇಲಿಯಾ: ಶಿಕ್ಷಣದ ಶ್ರೇಷ್ಠತೆ ಮತ್ತು ಪ್ರಿಮಿಯಂ ಎಫ್ & ಬಿ… ತೇಜಸ್ವಿ ಅವರು ನಡೆನುಡಿಯಲ್ಲಿ ಬಹುತೇಕ ಒಂದೇ ಎಂಬಂತೆ ಬದುಕಿದ ಅಪರೂಪದ ಲೇಖಕರು; ಡಾ.ಸಂಪತ್…

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆಯ ಗೆಲುವು: ರಾಜ್ಯ ವಿಧಾನಸಭೆಗೆ ಅವಧಿಗೆ ಮುನ್ನ ಚುನಾವಣೆ?; ಡಿಸೆಂಬರ್ ನಲ್ಲಿ ಎಲೆಕ್ಷನ್? 

10/03/2022, 15:58

ಹೊಸದಿಲ್ಲಿ(reporterkarnataka.com): ರಾಜ್ಯ ವಿಧಾನಸಭೆಗೆ ಅವಧಿಗೆ ಮುನ್ನವೇ ಚುನಾವಣೆ ನಡೆಯಲಿದೆಯೇ? ಅಂತಹ ಒಂದು ಮಾಹಿತಿ ದೆಹಲಿ ಕಡೆಯಿಂದ ಬರುತ್ತಿದೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಫುಲ್ ಖುಷಿಗೊಂಡಿರುವ ಬಿಜೆಪಿ ಹೈಕಮಾಂಡ್ ಈ ವರ್ಷ ಡಿಸೆಂಬರ್ ನಲ್ಲೇ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಸುವ ಬಗ್ಗೆ ಚಿಂತಿಸಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.

ಅಧಿಕಾರ ವಿರೋಧಿ ಅಲೆಯ ನಡುವೆಯಲ್ಲೂ ನಡೆದ ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. 5 ರಾಜ್ಯಗಳ ಪೈಕಿ 4ರಲ್ಲಿ ಅಧಿಕಾರಕ್ಕೆ ಬರಲಿದೆ. ಉತ್ತರ ಪ್ರದೇಶ, ಉತ್ತರಾಖಂಡ ಹಾಗೂ ಮಣಿಪುರದಲ್ಲಿ ಸ್ಪಷ್ಟ ಬಹುಮತ ಪಡೆದಿದೆ. ಗೋವಾದಲ್ಲಿ ಮಾತ್ರ ಅಧಿಕಾರದ ಗದ್ದುಗೆ ಏರಲು ಒಂದು ಸ್ಥಾನದ ಕೊರತೆ ಅನುಭವಿಸುತ್ತಿದೆ. ಪಂಜಾಬ್ ನಲ್ಲಿ ಮಾತ್ರ ಸಂಪೂರ್ಣ ನೆಲಕಚ್ಚಿ ಹೋಗಿದೆ. ಒಟ್ಟಾರೆಯಾಗಿ ಬಿಜೆಪಿ ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಣೆ ಮಾಡುತ್ತಾರೆ.

ಪಂಚ ರಾಜ್ಯದಲ್ಲಿ 4 ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಕಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಪರ ಅಲೆ ಇರುವಾಗಲೇ ಚುನಾವಣೆ ಮಾಡಿ ಮುಗಿಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯ ವಿಧಾನ ಸಭೆಯನ್ನು ಅವಧಿಗೆ ಮುನ್ನ ವಿಸರ್ಜಿಸಿ ಚುನಾವಣೆಗೆ ಹೋಗಲು ಸಾಧ್ಯವಾಗುತ್ತದೆ. ರಾಜ್ಯ ವಿಧಾನಸಭೆ ವಿಸರ್ಜಿಸಲು ರಾಜ್ಯಪಾಲರಿಗೆ ಮುಖ್ಯಮಂತ್ರಿ ಮನವಿ ಮಾಡಿದರಾಯಿತು. ರಾಜ್ಯಪಾಲರು ವಿಧಾನಸಭೆ ವಿಸರ್ಜಿಸುವ ಪ್ರಕ್ರಿಯೆ ನಡೆಸುತ್ತಾರೆ. ನಂತರ ಚುನಾವಣಾ ಆಯೋಗ ಎಲೆಕ್ಷನ್ ಗೆ ದಿನ ನಿಗದಿಪಡಿಸಲಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು