8:00 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಪಂಚಮಸಾಲಿ 2ಎ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ಆದೇಶ ಸದನದ ಮುಂದೆ ಮಂಡಿಸುವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

10/12/2024, 22:48

ಬೆಳಗಾವಿ(reporterkarnataka.com): ಪಂಚಮಸಾಲಿ 2ಎ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅಫಿಡೆವಿಟ್ ಹಾಗೂ ಕೋರ್ಟ್ ಆದೇಶವನ್ನು ಸದನದ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿ ಸುವರ್ಣ ಸೌಧದಲ್ಲಿ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಯವರು ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಿ ಈ ಭರವಸೆ ನೀಡಿದರು.
ಪಂಚಮಸಾಲಿಗಳ ಜನಾಂಗವನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ 2 ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳುವುದಕ್ಕೆ ನನ್ನ ಅಭ್ಯಂತರವಿಲ್ಲ ಎಂದು ಮುಖ್ಯಮಂತ್ರಿ ನುಡಿದರು.
ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ. ಹಿಂದಿನ ಬಸವರಾಜ ಬೊಮ್ಮಾಯಿ ಸರಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತ ಮುಸ್ಲಿಂರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿ ಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಮರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ಬಿಜೆಪಿ ಸರಕಾರ ಮುಸ್ಲಿಂರ ಮೀಸಲಾತಿ ರದ್ದು ಪಡಿಸುವುದಿಲ್ಲ. ಯತಾಸ್ಥಿತಿಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ಅಫಿಡೆವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾದ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನದ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು