3:50 AM Saturday27 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಪಂಚಮಸಾಲಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್‌ ನ್ಯಾಯಾಂಗ ತನಿಖೆಗೆ ನೀಡಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

16/12/2024, 21:54

*ಸರ್ಕಾರ ಕ್ಷಮೆ ಕೇಳಿಲ್ಲ, ಮುಂದೆ ಇದರ ಪರಿಣಾಮ ಅನುಭವಿಸಬೇಕಾಗುತ್ತದೆ*

ಬೆಂಗಳೂರು(reporterkarnataka.com): ಪಂಚಮಸಾಲಿ ಹಾಗೂ ಮರಾಠ ಸಮುದಾಯದ ಜನರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‌ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಹಾಗೂ ಮರಾಠ ಸಮುದಾಯದ ಜನರು ಮೀಸಲಾತಿಗಾಗಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ಮಾರಣಾಂತಿಕವಾಗಿ ಹೊಡೆದಿದ್ದಾರೆ. ಹತ್ತಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಮುದಾಯದ ಜನರು ರೊಚ್ಚಿಗೆದ್ದು ರಾಜ್ಯಾದ್ಯಂತ ಹೋರಾಟ ನಡೆಸಿದ್ದಾರೆ. ಈ ಘಟನೆಯನ್ನು ವಿಧಾನಸಭೆಯಲ್ಲಿ ಖಂಡಿಸಿದ್ದೇವೆ. ರಾಜ್ಯ ಸರ್ಕಾರ ಕೂಡಲೇ ಇದನ್ನು ನ್ಯಾಯಾಂಗ ತನಿಖೆಗೆ ವಹಿಸಿ, ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅನ್ನ ಕೊಡುವ ಪಂಚಮಸಾಲಿಗಳ ಮೇಲೆ ಕೈ ಮಾಡಿದ್ದಕ್ಕೆ ಸರ್ಕಾರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರೂ, ಕಾಂಗ್ರೆಸ್‌ ನಾಯಕರು ಅದಕ್ಕೆ ಸಮ್ಮತಿಸಿಲ್ಲ. ಲಾಠಿ ಚಾರ್ಜ್‌ ಮಾಡಿರುವುದು ಸರಿ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಇದರ ಪರಿಣಾಮ* ಎದುರಿಸಬೇಕಾಗುತ್ತದೆ. ಈ ವಿಚಾರದಲ್ಲಿ ಸದನದಲ್ಲಿ ಆರ್‌ಎಸ್‌ಎಸ್‌ ಹೆಸರು ತಂದಿರುವುದು ಅಕ್ಷಮ್ಯ. ಇದನ್ನು ಕಡತದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿದ್ದೇವೆ ಎಂದರು.
ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಗೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಇಡೀ ವರ್ಷ ಚುನಾವಣೆ ನಡೆಯುತ್ತಲೇ ಇರುತ್ತದೆ. ನೀತಿ ಸಂಹಿತೆಯಿಂದಾಗಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗುವುದಿಲ್ಲ. ಜೊತೆಗೆ ಜನರ ತೆರಿಗೆ ಹಣ ದುಂದುವೆಚ್ಚವಾಗುತ್ತಿದೆ. ಆದ್ದರಿಂದಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂತಹ ಉತ್ತಮ ಮಸೂದೆಯನ್ನು ತಂದಿದೆ. ಇದನ್ನು ವಿರೋಧ ಮಾಡುವವರಿಗೆ ದೇಶ ಒಂದು ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇಂತಹವರಿಗೆ ತೆರಿಗೆದಾರರ ಹಣದ ಬಗ್ಗೆ ಕಾಳಜಿ ಇಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು