6:42 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಪಾಂಗಾಳ: ದುಷ್ಕರ್ಮಿಗಳಿಂದ ವ್ಯಕ್ತಿಯ ಬರ್ಬರ ಹತ್ಯೆ; ಭೂ ವ್ಯವಹಾರ ಕೊಲೆಗೆ ಕಾರಣವೇ?

06/02/2023, 12:35

ಕಾಪು(reporterkarnataka.com): ಇಲ್ಲಿನ ಪಾಂಗಾಳ ಶ್ರೀ ಜನಾರ್ಧನ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಎಂದು ಗುರುತಿಸಲಾಗಿದೆ.

ದುಷ್ಕರ್ಮಿಗಳು ಪಾಂಗಾಳದಲ್ಲಿ ನೇಮೋತ್ಸದಲ್ಲಿದ್ದ ಶರತ್ ಶೆಟ್ಟಿ ಅವರಿಗೆ ಕರೆ ಮಾಡಿ ಪಾಂಗಾಳ ಸೇತುವೆ ಬಳಿ ಬರುವಂತೆ ಮಾಡಿದ್ದರು. ಶರತ್ ಶೆಟ್ಟಿ ಅವರು ಅಲ್ಲಿಗೆ ಬಂದಾಗ ದುಷ್ಕರ್ಮಿಗಳು ಶೆಟ್ಟರ ಮೇಲೆ ಡ್ರಾಗರ್‌ನಿಂದ ಹಲ್ಲೆ ಮಾಡಿ ಬಳಿಕ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ದುಷ್ಕರ್ಮಿಗಳಿಂದ ಮಾರಣಾಂತಿಕ ದಾಳಿಗೊಳಗಾಗಿ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ‌ ಬಿದ್ದಿದ್ದ ಶರತ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಗಂಭೀರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟರು. ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ, ಕಾಪು ಎಸ್ಸೈ ಸುಮ ಬಿ., ಕ್ರೈಂ ಎಸ್ಸೈ ಭರತೇಶ್ ಕಂಕಣವಾಡಿ ಸಹಿತ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಭೂ ವ್ಯವಹಾರದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಶರತ್ ಶೆಟ್ಟಿ ಭೂ ವ್ಯವಹಾರ ಮಾಡಿಕೊಂಡಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು