8:51 PM Friday18 - September 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ

ಇತ್ತೀಚಿನ ಸುದ್ದಿ

ಪಾಪದ ಪ್ರಾಯಶ್ಚಿತದಿಂದ ಉತ್ತಮ ನಡತೆ ರೂಡಿಸಿಕೊಳ್ಳಿ: ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದಲ್ಲಿ ಮಂಗಳೂರು ಬಿಷಪ್

10/12/2024, 16:01

ಮಂಗಳೂರು(reporterkarnataka.com):ಮೇರಿ ಮಾತೆ ಪ್ರೀತಿಯಿಂದ ಬರಮಾಡಿಕೊಳ್ಳುವ ಜತೆಗೆ ತನ್ನ ದಯೆಯನ್ನು ಎಲ್ಲರಿಗೂ ನೀಡುತ್ತಾ ಪೋಷಿಸುತ್ತಾರೆ. ಇದಕ್ಕಾಗಿ ನಾವು ಪಾಪದ ಪ್ರಾಯಶ್ಚಿತ ಮಾಡುವ ಮೂಲಕ ಉತ್ತಮ ನಡತೆಯನ್ನು ರೂಡಿಸಿಕೊಳ್ಳುವ ಅಗತ್ಯವಿದೆ ಎಂದು ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಪಷ್ ಡಾ.ಪೀಟರ್ ಪಾವ್ಲ್ ಸಲ್ಡಾನ ಹೇಳಿದರು.


ಅವರು ಭಾನುವಾರ ನಗರದ ಲೇಡಿಹಿಲ್‍ನ ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬದ ಸಂಭ್ರಮದ ಕೃತಜ್ಞತಾ ಪೂಜೆಯಲ್ಲಿ ಪ್ರವಚನ ನೀಡುತ್ತಾ, ದೇವರು ಎಂದಿಗೂ ಬಲಪ್ರಯೋಗಕ್ಕೆ ಇಳಿಯುವುದಿಲ್ಲ. ಭಕ್ತರು ದೇವರಲ್ಲಿ ಪ್ರಾರ್ಥನೆ ಮೂಲಕ ವಿನಂತಿಸಿಕೊಂಡಾಗ ಮಾತ್ರ ಅವರು ತಮ್ಮ ದಯೆಯನ್ನು ತೋರಿಸುತ್ತಾರೆ. ಮನುಷ್ಯರು ಸದಾ ಕಾಲ ಪಾಪದ ಕಡೆಗೆ ವಾಲುತ್ತಾರೆ ಆದರೆ ದೇವರ ಆಧಾರ ಇದ್ದಾಗ ಮಾತ್ರ ಈ ಪಾಪದ ಕೂಪದಿಂದ ಹೊರಬಂದು ಉತ್ತಮ ಸನ್ನಡತೆಯನ್ನು ರೂಡಿಸಿಕೊಳ್ಳಲು ಸಾಧ್ಯವಿದೆ ಎಂದರು.
ಇಟಲಿಯ ಪೊಂಪೈ ನಗರದಲ್ಲಿ ಪೊಂಪೈ ಮಾತೆಯ ಭಕ್ತಿ ಪ್ರಸಾರ ಮಾಡಲು ಬಾರ್ತಾಲೊ ಲೊಂಗೋ ಕಾರಣಕರ್ತನಾದ. ಇದೇ ರೀತಿಯಲ್ಲಿ ನಿರಂತರ ದೇವರ ಪ್ರಾರ್ಥನೆಯ ಮೂಲಕ ಮನಸ್ಸಿನಲ್ಲಿರುವ ಕಂದಕಗಳನ್ನು ನಿವಾರಿಸಿಕೊಂಡು ನಾವು ಉತ್ತಮ ಜೀವನವನ್ನು ನಡೆಸುವ ಮೂಲಕ ಲ್ಲರಿಗೂ ಒಳಿತನ್ನು ಮಾಡುವಂತಾಗರಬೇಕು ಎಂದರು.
ವಿಶೇಷ ಅರಾಧನಾ ವಿಧಿಯನ್ನು ಮಂಗಳ ಜ್ಯೋತಿ ಸಂಸ್ಥೆಯ ನಿರ್ದೇಶಕ ಫಾ. ವಿಜಯ್ ಮಚಾದೋ ನಡೆಸಿಕೊಟ್ಟರು. ಈ ಸಂದರ್ಭ ಉರ್ವ ಚರ್ಚಿನ ಪ್ರಧಾನ ಧರ್ಮಗುರು ಫಾ. ಬೆಂಜಮಿನ್ ಪಿಂಟೋ, ಅಶೋಕನಗರ ಸಂತ ಡಾಮಿನಿಕ್ ಚರ್ಚಿನ ಪ್ರಧಾನ ಧರ್ಮಗುರು ಫಾ.ಡೇನಿಯಲ್ ಸಂಪತ್ ವೇಗಸ್, ಉರ್ವ ಚರ್ಚಿನ ಫಾ. ಹೆನ್ರಿ ಸಿಕ್ವೇರಾ, ಸಹಾಯಕ ಧರ್ಮ ಗುರು ಫಾ. ಲ್ಯಾನ್ಸನ್ ಪಿಂಟೋ ಸೇರಿದಂತೆ ಸುತ್ತಮುತ್ತಲಿರುವ ಚರ್ಚ್‍ಗಳ ಸರಿಸುಮಾರು 60ಕ್ಕೂ ಅಧಿಕ ಧರ್ಮಗುರುಗಳು ಕೃತಜ್ಞತಾ ಪೂಜೆಯಲ್ಲಿ ಭಾಗವಹಿಸಿದ್ದರು. ಸಾವಿರಕ್ಕೂ ಅಧಿಕ ಮಂದಿ ಭಕ್ತರು ಈ ಸಂಭ್ರಮದ ಕೃತಜ್ಞತಾ ಪೂಜೆಯಲ್ಲಿ ಭಾಗವಹಿಸಿ ಧನ್ಯರಾದರು. ಪೂಜೆಯ ಬಳಿಕ ಪರಮ ಪ್ರಸಾದದ ಮೆರವಣಿಗೆ ಉರ್ವ ಚರ್ಚಿನ ಮೂಲಕ ಉರ್ವ ಮಾರ್ಕೆಟ್, ಗಾಂಧಿನಗರ, ಮಣ್ಣಗುಡ್ಡೆ, ಲೇಡಿಹಿಲ್ ಸರ್ಕಲ್ ಮೂಲಕ ಉರ್ವ ಚರ್ಚ್‍ಗೆ ಮತ್ತೆ ಬರಲಾಯಿತು. ಈ ಬಳಿಕ ಸಾವಿರಾರು ಮಂದಿ ಭಕ್ತರು ಪರಮ ಪ್ರಸಾದದ ಆಶೀರ್ವಾದವನ್ನು ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು