1:23 PM Tuesday4 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಪಾರಂಪರಿಕ ತಾಣಗಳ ಸಂರಕ್ಷಣೆಗೆ ದತ್ತು ಯೋಜನೆ: ಪಟ್ಟದಕಲ್ಲಿನಲ್ಲಿ ಪ್ರವಾಸಿ ಪ್ಲಾಜಾ; ಬಾದಾಮಿಯಲ್ಲಿ ತ್ರಿ-ಸ್ಟಾರ್ ಹೋಟೆಲ್

13/12/2024, 21:16

ಬೆಳಗಾವಿ(reporterkarnataka.com): ರಾಜ್ಯದಲ್ಲಿ 25,000 ಪಾರಂಪರಿಕ ತಾಣಗಳ ಪೈಕಿ 810 ತಾಣಗಳನ್ನು ಮಾತ್ರ ಸಂರಕ್ಷಿಸಲು ಸಾಧ್ಯವಾಗಿದೆ. ಉಳ್ಳವರ ಸಹಕಾರ ಮತ್ತು ಸಾಮುದಾಯಿಕ ಸಹಕಾರದಿಂದ ಪಾರಂಪರಿಕ ತಾಣಗಳನ್ನು ಅಭಿವೃದ್ಧಿಪಡಿಸಲು ಸಾಧ್ಯ. ಆದ್ದರಿಂದ ಕರ್ನಾಟಕ ಸರ್ಕಾರವು “ನಮ್ಮ ಸ್ಮಾರಕ ದತ್ತು ಯೋಜನೆ”ಯನ್ನು ಪ್ರಾರಂಭಿಸಿದೆ ಮತ್ತು ಈ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಇಂದು ವಿಧಾನ ಪರಿಷತ್ತಿಗೆ ಹೇಳಿದರು.
ಹಣಮಂತ ನಿರಾಣಿ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು ಪ್ರವಾಸೋದ್ಯಮವನ್ನು ಉತ್ತೇಜಿಸಿ ಅಭಿವೃದ್ಧಿಪಡಿಸುವ ದೃಷ್ಟಿಯಿಂದ ವಿಜಯಪುರ ಪೂರ್ಣ ಜಿಲ್ಲೆಯನ್ನು ಹಾಗೂ ಬಾಗಲಕೋಟೆ ಜಿಲ್ಲೆಯ ಐಹೊಳೆ, ಬಾದಾಮಿ, ಪಟ್ಟದಕಲ್ಲು, ಕೂಡಲಸಂಗಮ, ಬೀಳಗಿ ತಾಣಗಳನ್ನು ಆದ್ಯತಾ ಪ್ರವಾಸಿ ತಾಣಗಳಾಗಿ ಗುರುತಿಸಿ, ಈ ತಾಣಗಳ ತಾಲ್ಲೂಕುಗಳಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಖಾಸಗೀ ಹೂಡಿಕೆದಾರರಿಗೆ ಸಹಾಯಧನ, ರಿಯಾಯಿತಿ ಮತ್ತು ಉತ್ತೇಜನಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿತ್ತು.
ಬಾಗಲಕೋಟೆ ಮತ್ತು ವಿಜಯಪುರ ಅವಳಿ ಜಿಲ್ಲೆಗಳಲ್ಲಿನ ಪ್ರವಾಸಿ ತಾಣಗಳಾದ ಬದಾಮಿ, ಬನಶಂಕರಿ, ಐಹೂಳೆ, ಪಟ್ಟದಕಲ್ಲು, ಗೋಲಗುಂಬಜ್, ಶಿವನ ಮಂದಿರ, ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿರುವ ಪಕ್ಷಿಧಾಮ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಾಗಿವೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಗುಹಾಂತರ ದೇವಾಲಯ, ಐಹೊಳೆ ದುರ್ಗಾ ದೇವಾಲಯ ಸಂಕಿರ್ಣ ಮತ್ತು ವಿಶ್ವ ಪರಂಪರೆ ಸ್ಮಾರಕ ಪಟ್ಟದಕಲ್ಲು ದೇವಾಲಯಗಳ ಸಮೂಹ ಹಾಗೂ ವಿಜಯಪುರ ಜಿಲ್ಲೆಯ ಗೋಲಗುಂಬಜ್, ಈ ಸ್ಥಳಗಳ ಸ್ಮಾರಕಗಳ ನಿರ್ವಹಣೆ ಹಾಗೂ ಉಸ್ತುವಾರಿಯನ್ನು ಭಾರತೀಯ ಪುರಾತತ್ವ ಸಂರಕ್ಷಣಾ (ASI) ರವರ ವ್ಯಾಪ್ತಿಗೆ ಒಳಪಡುತ್ತದೆ. ಬನಶಂಕರಿ ದೇವಾಲಯವು ಶ್ರೀ ಬನಶಂಕರಿ ದೇವಸ್ಥಾನ ಟ್ರಸ್ಟ್ ಸಮಿತಿ ರವರ ಹಾಗೂ ವಿಜಯಪುರ ಜಿಲ್ಲೆಯ ಶಿವನ ಮಂದಿರವು ಖಾಸಗಿ ಟ್ರಸ್ಟ್ನವರ ಅಧೀನದಲ್ಲಿರುತ್ತದೆ. ಆಲಮಟ್ಟಿ ಹಿನ್ನೀರಿನಲ್ಲಿರುವ ಪಕ್ಷಿ ಮೀಸಲು ಧಾಮವು ಅರಣ್ಯ ಇಲಾಖೆ ರವರ ಅಧೀನದಲ್ಲಿರುತ್ತದೆ. ಆದ್ದರಿಂದ, ಪಕ್ಷಿ ತಾಣಗಳನ್ನು ನಿರ್ಮಿಸುವುದು ಇಲಾಖೆಯ ವ್ಯಾಪ್ತಿಯಲ್ಲಿರುವುದಿಲ್ಲ. ಆದರೂ ಅರಣ್ಯ ಇಲಾಖೆ ಜೊತೆಗೆ ಸಮಾಲೋಚಿಸಿ ಪಕ್ಷಿಧಾಮ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಪ್ರಸ್ತುತ, ಜಾರಿಗೆ ತಂದಿರುವ 2024-29ರ ನೂತನ ಕರ್ನಾಟಕ ಪ್ರವಾಸೋದ್ಯಮ ನೀತಿಯಲ್ಲಿ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರವಾಸೋದ್ಯಮ ಕ್ಷೇತ್ರದ ಯೋಜನೆಗಳಲ್ಲಿ ಹೂಡಿಕೆ ಮಾಡಲು ಮುಂದೆ ಬರುವ ಖಾಸಗಿ ಉದ್ಯಮಿಗಳಿಗೆ ಶೇ.5 ರಷ್ಟು ಹೆಚ್ಚುವರಿ ಸಹಾಯಧನ ಸೌಲಭ್ಯಗಳನ್ನು ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಇದಲ್ಲದೆ, ಸದರಿ ಜಿಲ್ಲೆಗಳಲ್ಲಿನ ಪ್ರವಾಸಿ ತಾಣಗಳನ್ನು ನೂತನ ಆದ್ಯತಾ ಪ್ರವಾಸಿ ತಾಣಗಳಾಗಿ ಗುರುತಿಸಲು ಕ್ರಮವಹಿಸಲಾಗುವುದು.
ಬಾಗಲಕೋಟೆ ಜಿಲ್ಲೆಯ ಐಹೊಳೆ ಗ್ರಾಮದ ಐತಿಹಾಸಿಕ ಮತ್ತು ಪಾರಂಪರಿಕ ಸ್ಮಾರಕಗಳನ್ನು ಸಂರಕ್ಷಿಸುವ ಸಲುವಾಗಿ ಸ್ಮಾರಕಗಳನ್ನೇ ಮನೆಗಳನ್ನಾಗಿ ಪರಿವರ್ತಿಸಿಕೊಂಡು ವಾಸಮಾಡುತ್ತಿರುವ ಸುಮಾರು 135 ಕುಟುಂಬಗಳನ್ನು ಸ್ಥಳಾಂತರಿಸಿ, ಪುನರ್ ವಸತಿ ಕಲ್ಪಿಸುವ ದೃಷ್ಟಿಯಿಂದ ಐಹೊಳೆ ಗ್ರಾಮದ ಸರ್ವೆ ನಂ. 218 ಮತ್ತು 225ರ ಭೂ-ಮಾಲೀಕರಿಂದ ಜಮೀನನ್ನು ಖರೀದಿಸಿ ಸ್ಮಳಾಂತರಿಸಲು ರೂ.3.50 ಕೋಟಿಗಳ ಅನುದಾನವನ್ನು ಚಾಲುಕ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರಕ್ಕೆ, ಬಿಡುಗಡೆಗೊಳಿ ಸರ್ಕಾರ ಆದೇಶ ಹೊರಡಿಸಿದೆ.
135 ಕುಟುಂಬಗಳು ಪುನರ್ವಸತಿಗೆ ಒಪ್ಪಿಗೆಯನ್ನು ಮತ್ತು ಈ ಕಾರ್ಯಕ್ರ ರೈತರು ಜಮೀನನ್ನು ನೀಡಲು ಒಪ್ಪಿಗೆ ಸೂಚಿಸಿರುತ್ತಾರೆ. ಮುಂದಿನ ಪ್ರಕ್ರಿಯೆ ಪ್ರಗತಿಯಲ್ಲಿರುತ್ತದೆ. ಈ 135 ಕುಟುಂಬಗಳನ್ನು ಸ್ಥಳಾಂತರಿಸಿ, ಪುನರ್ ವಸತಿ ಕಲ್ಪಿಸಿದ ನಂತರ ಎಂಟು ಸ್ಮಾರಕಗಳ ಸಂರಕ್ಷಣೆಯನ್ನು ಅಂದಾಜು ರೂ. 8-10 ಕೋಟಿಗಳ ವೆಚ್ಚದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಮಾನ ಟ್ರಸ್ಟ್ ಶೇ.50 ಮತ್ತು ಸರ್ಕಾರದ ವಂತಿಗೆ ಶೇ.50ರಷ್ಟು ಅನುಪಾತದಲ್ಲಿ ವೆಚ್ಚವನ್ನು ಭರಿಸಿ ಸದರಿ ಟ್ರಸ್ಟ್ ವತಿಯಿಂದ ಸಂರಕ್ಷಣೆಯನ್ನು ಕೈಗೊಳ್ಳಲು ದಿನಾಂಕ.05/03/2024ರಂದು ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಮಾನ ಟ್ರಸ್ಟ ನಡುವ ತ್ರಿಪಕ್ಷೀಯ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ಪಟ್ಟದಕಲ್ಲು ಪ್ರವಾಸಿ ತಾಣದಲ್ಲಿ ಪ್ರವಾಸಿಗರಿಗೆ ಪಾರ್ಕಿಂಗ್ ಸೌಲಭ್ಯ, ಕಫೆಟೇರಿಯಾ, ಪ್ರವಾಸಿ ಮಾಹಿತಿ ಕೇಂದ್ರ, ಕರಕುಶಲ ಮಳಿಗೆ ಇತ್ಯಾದಿ ಸೌಲಭ್ಯಗಳನ್ನು ಒಂದೇ ಸೂರಿನಲ್ಲಿ ಒದಗಿಸಲು ರೂ.29.25 ಕೋಟಿ ಅಂದಾಜು ವೆಚ್ಚದಲ್ಲಿ ಪ್ರವಾಸಿ ಪ್ಲಾಜಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ 72 ಕೊಠಡಿಗಳ ತ್ರಿ-ಸ್ಟಾರ್ ಹೋಟೆಲ್ ನಿರ್ಮಾಣ ಕಾಮಗಾರಿಯನ್ನು ರೂ.1832.00 ಲಕ್ಷಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ ನೀಡಿರುತ್ತದೆ. ರೂ.987.00 ಲಕ್ಷಗಳ ಅನುದಾನವನ್ನು ಅನುಷ್ಠಾನ ಸಂಸ್ಥೆಗೆ ಬಿಡುಗಡೆ ಮಾಡಲಾಗಿದೆ, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು