8:38 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಪರಶುರಾಮ ಮೂರ್ತಿ ಹಗರಣ: ನಿರೀಕ್ಷಣಾ ಜಾಮೀನು ತಿರಸ್ಕಾರ; ಕಲ್ಲಿಕೋಟೆಯಲ್ಲಿ ಶಿಲ್ಪಿ ಕೃಷ್ಣ ನಾಯ್ಕ ಬಂಧನ

11/11/2024, 16:45

ಕಾರ್ಕಳ(reporterkarnataka.com): ರಾಜ್ಯಮಟ್ಟದಲ್ಲಿ ಸುದ್ದಿ ಮಾಡಿದ್ದ, ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದ ಬೈಲೂರಿನ ಥೀಮ್ ಪಾರ್ಕ್ ನಲ್ಲಿ  ಪರಶುರಾಮ ಮೂರ್ತಿ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಶಿಲ್ಪಿ, ಕೃಷ್ ಆರ್ಟ್ ವರ್ಲ್ಡ್‌ನ ಉತ್ತರ ಕನ್ನಡ ದ  ಕೃಷ್ಣ ನಾಯ್ಕ ಅವರನ್ನು ಕಾರ್ಕಳ ನಗರ ಪೊಲೀಸರು ಕ್ಯಾಲಿಕಟ್‌ನಲ್ಲಿ ಬಂಧಿಸಿದ್ದಾರೆ.
ಕೃಷ್ಣ ಶೆಟ್ಟಿ ಬಜಗೋಳಿಯವರು ಪರಶುರಾಮ ಮೂರ್ತಿ ಲೋಪವಾಗಿದೆ ಎಂಬ ನಗರ ಠಾಣೆಯಲ್ಲಿ ದಾಖಲಿಸಿರುವ ದೂರಿಗೆ ಸಂಬಂಧಪಟ್ಟಂತೆ ನ.4ರಂದು ಕಾರ್ಕಳ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ವಾದ- ಪ್ರತಿವಾದ ಆಲಿಸಿದ ನ್ಯಾಯಾಧೀಶರು ಶಿಲ್ಪಿ ಕೃಷ್ಣ ನಾಯ್ಕ ಅವರ ನಿರೀಕ್ಷಣಾ ಜಾಮೀನು ಆದೇಶವನ್ನು ನ.7ಕ್ಕೆ ಕಾಯ್ದಿರಿಸಿದ್ದರು. ನ.7ರಂದು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತವಾಗಿತ್ತು‌. ಬಳಿಕ   ಪೊಲೀಸರು ಕೃಷ್ಣ ನಾಯ್ಕನನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು