3:45 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಬಗ್ಗೆ ಅನುಮಾನವಿದ್ದರೆ ತನಿಖೆ ನಡೆಸಿ: ರಾಜ್ಯ ಸರಕಾರಕ್ಕೆ ಶಾಸಕ ಸುನಿಲ್ ಕುಮಾರ್ ಸವಾಲು

21/10/2023, 22:19

ಕಾರ್ಕಳ(reporterkarnataka.com): ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಬಗ್ಗೆ ಅನುಮಾನವಿದ್ದರೆ ತಕ್ಷಣವೇ ತನಿಖೆಗೊಳಪಡಿಸಿ. ಸುಳ್ಳು ಅಪಪ್ರಚಾರ ಮಾಡುವವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಮಾಜಿ ಸಚಿವ, ಹಾಲಿ ಶಾಸಕ ಸುನಿಲ್ ಕುಮಾರ್ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ಅಗ್ರಹಿಸಿದ್ದಾರೆ.
ಅವರು ಶನಿವಾರ ಕಾರ್ಕಳದ ವಿಕಾಸ ಕಚೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಪರಶುರಾಮ ಥೀಮ್ ಪಾರ್ಕ್ ಗೆ ತಡೆಹಿಡಿದ ಅನುದಾನವನ್ನು ತಕ್ಷಣ ಬಿಡುಗಡೆಗೊಳಿಸಿ ಸ್ಥಗಿತಗೊಂಡ ಕಾಮಗಾರಿಯನ್ನು ತಕ್ಷಣವೇ ಅರಂಭಿಸಬೇಕು. ಥೀಮ್ ಪಾರ್ಕನ್ನು ಶೀಘ್ರದಲ್ಲೇ ಪ್ರವಾಸಿಗರಿಗೆ ಮುಕ್ತಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.
ತಡೆಹಿಡಿದ ಅನುದಾನ ಬಿಡುಗಡೆ ಮಾಡಲು ಸರಕಾರದ ತಯಾರಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ನಗರ ನಕ್ಸಲರು, ಕಮ್ಯುನಿಸ್ಟರು, ಎಡಪಂಥೀಯರು, ಅನ್ಯಧರ್ಮಿಯರು ನಮ್ಮ ವಿಚಾರಗಳಿಗೆ ದಾಳಿ ಮಾಡುತಿದ್ದಾರೆ. ಇದೊಂದು ವ್ಯವಸ್ಥಿತ ಸಂಚಾಗಿದೆ. ಇದರಿಂದ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗಿದೆ ಎಂದು ಅವರು ಸಲಹೆ ನೀಡಿದರು.
ಸಾಮಾಜಿಕ ಬದ್ದತೆ ಇಲ್ಲದವರು ಟೀಕೆ ಮಾಡುವವರಾಗಿದ್ದಾರೆ. ನಾನು ಕಾರ್ಕಳವನ್ನು ಪ್ರೀತಿಸುವವನಾಗಿದ್ದೇನೆ. ಆದ್ದರಿಂದ ಕಾರ್ಕಳದಲ್ಲಿ ಅಭಿವೃದ್ಧಿ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಪ್ರಮಾಣದ ಪ್ರೋತ್ಸಾಹ ನೀಡುತ್ತಿದ್ದೇನೆ ಎಂದರು.
ಪರಶುರಾಮ ಥೀಮ್ ಪಾರ್ಕ್ 10 ವರ್ಷಗಳ ಕನಸಾಗಿದೆ. ಅದಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಕನಸಿನ ಯೋಜನೆಗೆ ಕಾಂಗ್ರೆಸ್ ಅಪಪ್ರಚಾರ ನಡೆಸಿ ಮುಂದಿನ ಲೋಕಸಭೆ ಚುನಾವಣೆಗೆ ರಾಜಕೀಯ ಲಾಭ ಪಡೆದುಕೊಳ್ಳುತ್ತಿದೆ ಎಂದು
ಸುನಿಲ್ ಕುಮಾರ್ ಆರೋಪಿಸಿದರು.
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಥೀಮ್ ಪಾರ್ಕ್ ಉದ್ಘಾಟನೆ ಮಾಡಲಾಗಿದೆ. ಇದು ಎಲ್ಲ ಸರ್ಕಾರಗಳಲ್ಲಿ ಸಹಜ ಪ್ರಕ್ರಿಯೆಯಾಗಿದೆ. 16.50 ಕೋಟಿ ರೂಪಾಯಿ ವೆಚ್ಚದಲ್ಲಿ ಬಿಜೆಪಿ ಸರಕಾರ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಮಾಡಲು ಮಂಜೂರಾತಿ ನೀಡಿತ್ತು. ನಿರ್ಮಾಣಗೊಂಡ ನಲ್ಲಿ 6.5 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಆದರೆ ಜನವರಿ ತಿಂಗಳ ಬಳಿಕ ಬಿಜೆಪಿ ಸರಕಾರದ ಮಾಡಿದ ಎಲ್ಲಾ ಅನುದಾನವನ್ನು ಸಿದ್ದರಾಮಯ್ಯ ಸರಕಾರ ತಡೆಹಿಡಿದಿದ್ದು ಅದರಲ್ಲೂ 8 ಕೋಟಿ ಅನುದಾನ ಕೂಡ ಒಂದಾಗಿದೆ. ಆ 8 ಕೋಟಿ ಅನುದಾನ ಬಿಡುಗಡೆ
ಮಾಡಲು ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಅಸಮರ್ಥರಾಗಿದ್ದಾರೆ. ಸರಕಾರ ಹಣ ಬಿಡುಗಡೆ ಮಾಡಲು ತಯಾರಿಲ್ಲವಾದರೆ ಭಿಕ್ಷೆ ಬೇಡಿ ಮೂರ್ತಿ ನಿರ್ಮಾಣ ಮಾಡಿಯೆ ಸಿದ್ದ ಎಂದು ಎಂದು ಸುನಿಲ್ ಕುಮಾರ್ ಹೇಳಿದರು.
ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಪಕ್ಷ ನನ್ನ ಮೇಲೆ ಅಪಪ್ರಚಾರ ಮಾಡುತ್ತಲೆ ಬಂದಿದೆ. ಕಟ್ಟು ಕತೆಗಳನ್ನು ಕಟ್ಟುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಪಕ್ಷ ಅಧಿಕಾರಕ್ಕೆ ಬಂದು 5 ತಿಂಗಳು ಕಳೆದಿದೆ. ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ತನಿಖೆ ನಡೆಸಲು ವಿಫಲರಾಗಿರುವುದು ಯಾಕೆ ? ಅವರ ದ್ವಂದ್ವ ನೀತಿ ಯಾಕೆ ? ಹಾಗಾದರೆ ಕಾಂಗ್ರೆಸ್ ಪಕ್ಷದ ನಿಲುವು ಏನೆಂದು ಪ್ರಶ್ನಿಸಿದರು.
ಡೀಲ್ ಮಾಸ್ಟರ್ ಕಾರ್ಕಳಕ್ಕೆ ಬಂದ ಬಳಿಕ 100 ಸುಳ್ಳು ಗಳನ್ನು ಹೇಳುತ್ತಾ ಬರುತ್ತಿದ್ದಾರೆ ಎಂದು ಪರೋಕ್ಷವಾಗಿ ಪ್ರಮೋದ್ ಮುತಾಲಿಕ್ ಅವರನ್ನು ಕುಟುಕಿದರು.

ಬಿಜೆಪಿ ಮುಖಂಡ ಮಣಿರಾಜ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಮಾತನಾಡಿದರು.
ಸಭೆಯಲ್ಲಿ ಸುಧೀರ್ ಹೆಗ್ಡೆ ಬೈಲೂರು, ರೇಶ್ಮಾ ಉದಯ್ ಶೆಟ್ಟಿ , ಬೋಳ ಸದಾಶಿವ ಸಾಲಿಯಾನ್, ಸವಿತಾ ಎಸ್ ಕೋಟ್ಯಾನ್, ರವೀಂದ್ರ ಮಡಿವಾಳ ಉಪಸ್ಥಿತರಿದ್ದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು