5:14 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ…

ಇತ್ತೀಚಿನ ಸುದ್ದಿ

ಪರೇಶ್ ಮೇಸ್ತಾ ಕುಟುಂಬ ಮೇಲ್ಮನವಿ, ಮರು ತನಿಖೆಗೆ ಬಯಸಿದ್ರೆ ಅವರ ಜತೆ ನಿಲ್ಲುತ್ತೇವೆ: ಸಿ.ಟಿ.ರವಿ

04/10/2022, 21:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

Info.reporter Karnataka agnail.com

ನಾವು ಪರೇಶ್ ಮೇಸ್ತಾ ಕುಟುಂಬದ ಪರ ನಿಲ್ಲುತ್ತೇವೆ. ಮೇಲ್ಮನವಿ, ಮರು ತನಿಖೆಗೆ ಕುಟುಂಬ ಬಯಸಿದ್ರೆ ಅವರ ಜೊತೆ ನಿಲ್ಲುತ್ತೇವೆ ಎಂದು ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಗಣಪತಿ ಲೈವ್ ಸ್ಟೇಟ್ಮೆಂಟ್ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ರು. ಲೈವ್ ಸ್ಪೇಟ್ಮೆಂಟ್ನ ಡೆತ್ ಸ್ಟೇಟ್ಮೆಂಟ್ ಎಂದು ಪರಿಗಣನೆ ಮಾಡ್ತಾರೆ. ಆದರೆ ಆ ಸ್ಟೇಟ್ಮೆಂಟ್ಗೂ ಸಿಬಿಐ ಬಿ ರಿಪೋರ್ಟ್ ಕೊಟ್ಟಿದೆ ಎಂದು ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

55-60 ವರ್ಷ ಕೇಂದ್ರದಲ್ಲಿ ಆಡಳಿತ ನಡೆಸಿದ ಪಕ್ಷದ ಬೇರು-ಬಾಹು ಎಲ್ಲೆಲ್ಲಿ ಇದೆಯೋ..? ಕಾಂಗ್ರೆಸ್ನ ಪ್ರಭಾವ ವಲಯ ಎಲ್ಲೆಲ್ಲಿದೆಯೋ ಹೇಳಕ್ಕಾಗಲ್ಲ, ಅಷ್ಟನ್ನ ಹೇಳ್ತೀನಿ. ಎಷ್ಟೋ ಪ್ರಕರಣಗಳು ರೀ ಓಪನ್ ಆಗಿ ಹತ್ತಾರು ವರ್ಷಗಳ ಬಳಿಕ ಶಿಕ್ಷೆಯಾಗಿದೆ. ಸಿದ್ದರಾಮಯ್ಯ ವಕೀಲರು, ಇದೆಲ್ಲಾ ಅವರಿಗೆ ಗೊತ್ತಿದೆ ಎಂದು ಭಾವಿಸುತ್ತೇನೆ. ಸಿದ್ದರಾಮಯ್ಯ ತನ್ನೆಲ್ಲಾ ಪಾಪದಿಂದ ಮುಕ್ತನಾಗಿದ್ದೇನೆ ಎಂದು ಭಾವಿಸುವುದು ಬೇಡ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು