2:01 AM Sunday24 - November 2024
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ…

ಇತ್ತೀಚಿನ ಸುದ್ದಿ

‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮ: ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ಜತೆ ಪ್ರಧಾನಿ ಮೋದಿ ಸಂವಾದ

01/04/2022, 23:00

ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರಿಂದ 5 ನೇ ಆವೃತ್ತಿಯ ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮವು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಆನ್ಲೈನ್/ವರ್ಚುವಲ್ ಮೂಲಕ ಶುಕ್ರವಾರ ಜರುಗಿತು.  

‘ಪರೀಕ್ಷಾ ಪೇ ಚರ್ಚಾ’ ವರ್ಚುವಲ್ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಿಂದ ನೇರ ಪ್ರಸಾರದಲ್ಲಿ ಪರೀಕ್ಷೆಗೆ ಸಂಬಧಿಸಿದಂತೆ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರ ಪ್ರಶ್ನೆಗಳಿಗೆ ಉತ್ತರಿಸಿದರು.  

ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಶುಕ್ರವಾರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ವೀಕ್ಷಣೆಗೆ ಶಾಲಾ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಯಿತು. ದೆಹಲಿಯ ಖುಷಿ ಅವರು ಪ್ರಧಾನಿಯವರಿಗೆ ಮೊದಲ ಪ್ರಶ್ನೆ ಕೇಳಿದರು. ಹೀಗೆ ಪಾಲಕರು, ಶಿಕ್ಷಕರು ವಿದ್ಯಾರ್ಥಿಗಳು ಪ್ರಧಾನಿಯವರಿಗೆ ಹಲವಾರು ಪ್ರಶ್ನೆಗಳನ್ನು ಕೇಳಿದರು.

ಪಾಲಕರು, ಶಿಕ್ಷಕರು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪರೀಕ್ಷೆಯು ವಿದ್ಯಾರ್ಥಿ ಜೀವನದ ಒಂದು ಮುಖ್ಯ ಘಟ್ಟವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಹಬ್ಬವಾಗಿ ಪರಿವರ್ತಿಸಬೇಕು ಎಂದು ಸಲಹೆ ನೀಡಿದರು.

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಬಾರದು. ಭಯವನ್ನು ತೊರೆದು ಪರೀಕ್ಷೆ ಬರೆಯಬೇಕು. ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗಬಾರದು, ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಧ್ಯಾನದಿಂದ ಮರೆವಿನ ಸಮಸ್ಯೆಯನ್ನು ಮೆಟ್ಟಿ ನಿಲ್ಲಬಹುದಾಗಿದೆ. ಏಕಾಗ್ರತೆಯಿಂದ ಓದಿನ ಕಡೆ ಗಮನ ಹರಿಸಿ ಓದಿದರೆ, ಓದಿದ್ದು ಮರೆಯುವುದಿಲ್ಲ ಎಂದು ಪ್ರಧಾನಿ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. 

ಸಾಮಾಜಿಕ ಜಾಲತಾಣಗಳ ಅಡೆತಡೆಯಿಂದ ಹೊರಬರುವುದು ಹೇಗೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಸಮಸ್ಯೆ ಇರುವುದು ಮನಸ್ಸಿನಲ್ಲಿ ಹೊರತು ಮಾಧ್ಯಮಗಳಿಂದಲ್ಲ. ಆನ್ಲೈನ್ ಇರಲಿ, ಆಫ್ಲೈನ್ ಇರಲಿ ಅದನ್ನು ನಿಯಂತ್ರಿಸುವುದು ನಮ್ಮ ಮನಸ್ಸು ಎಂದರು.  

ನಮ್ಮ ಮನಸ್ಸಿನಲ್ಲಿ ಸಮಸ್ಯೆಗಳಿವೆ ಅದನ್ನು ಮೊದಲು ಸರಿಪಡಿಸಬೇಕು ಎಂದರು. ಆನ್ಲೈನ್ನಲ್ಲಿ ಪಠ್ಯಕ್ಕೆ ಸಂಬಂಧಿಸಿದ ಹಲವಾರು ಮಾಹಿತಿ ಸಿಗುವುದರಿಂದ ಆನ್ಲೈನ್ ಪಠ್ಯ ಸಾಮಾಗ್ರಿಗಳ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಆನ್ಲೈನ್ ಇರಲಿ, ಆಫ್ಲೈನ್ ಇರಲಿ ಇದರ ಪ್ರಯೋಜನ ವಿದ್ಯಾರ್ಥಿಗಳು ಪಡೆಯಬೇಕು. ಆನ್ಲೈನ್ನಲ್ಲಿ ಸಿಗುವ ಜ್ಞಾನವನ್ನು ಬಳಸಿಕೊಳ್ಳಬೇಕು. ಡಿಜಿಟಲ್ ಗೆಜೆಟ್ಗಳ ಬಳಕೆಯಲ್ಲಿ ವಿದ್ಯಾರ್ಥಿಗಳು ಶಿಸ್ತನ್ನು ಕಾಪಾಡಿಕೊಳ್ಳಬೇಕು. ನೂತನ ಶಿಕ್ಷಣ ನೀತಿಯೂ ರಾಷ್ಟ್ರೀಯ ಶಿಕ್ಷಣ ನೀತಿಯಾಗಿದೆ. 2014 ರಿಂದ ಶಿಕ್ಷಣ ಸುಧಾರಣೆಗೆ ಸರ್ಕಾರ ಪ್ರಯತ್ನಿಸುತ್ತಿದೆ. ಸಮಾಜದ ಎಲ್ಲಾ ವರ್ಗದೊಂದಿಗೆ ಸಮಾಲೋಚಿಸಿ ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು. 

ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಯುತ್ತದೆ ಇದರಿಂದ ಶಿಕ್ಷಣದಲ್ಲಿ ಗುರಿ ಸಾಧಿಸಬಹುದಾಗಿದೆ. ನೂತನ ಶಿಕ್ಷಣ ನೀತಿಯಲ್ಲಿ ವಿದ್ಯಾರ್ಥಿಗಳಿಗೆ ಅವರ ಇಚ್ಚಾನುಸಾರ ಕಲಿಕೆಗೆ ಅವಕಾಶ ಕಲ್ಪಸಲಾಗಿದೆ ಎಂದರು.  

21 ನೇ ಶತಮಾನದ ಅಗತ್ಯಕ್ಕೆ ಅನುಗುಣವಾಗಿ ಸ್ಪರ್ಧಿಸುವುದು ಮುಖ್ಯ, ಹಾಗಾಗಿ ಹೊಸ ಮಾರ್ಗದಲ್ಲಿ ಸಾಗಲು ನೂತನ ಶಿಕ್ಷಣ ನೀತಿ ಸಹಕಾರಿಯಾಗಿದೆ. ಎನ್ಇಪಿ ಯನ್ನು ಸಾಕಾರಗೊಳಿಸಿದಷ್ಟು ಲಾಭದಾಯಕವಾಗಲಿದೆ ಎಂದರು.  

ಮಕ್ಕಳ ಮೇಲೆ ಪರೀಕ್ಷೆಯ ಒತ್ತಡಕ್ಕಿಂತ ಶಿಕ್ಷಕರು ಮತ್ತು ಅವರ ಪಾಲಕರ ಒತ್ತಡವಿದೆ. ಯಾರು ಕೂಡ ಮಕ್ಕಳ ಮೇಲೆ ಪರೀಕ್ಷೆಯ ಸಂದರ್ಭದಲ್ಲಿ ಒತ್ತಡ ಹೇರಬಾರದು. ರಾಷ್ಷ್ರದಲ್ಲಿ ಎನ್ಇಪಿಯನ್ನು ಜಾರಿಗೋಳಿಸಲು ಶಿಕ್ಷಕರು ಸಹಕಾರ ನೀಡಬೇಕು.  ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿದೆ ಎಂದರು.

 ವಿದ್ಯಾರ್ಥಿಗಳ ಆಸೆ ಆಕಾಂಕ್ಷೆಯನ್ನು ಅರಿಯಲು ಪ್ರಯತ್ನಿಸಬೇಕು. ಪಾಲಕರು, ಶಿಕ್ಷಕರು ತಮ್ಮ ಅಕಾಂಕ್ಷೆಗಳನ್ನು ಮಕ್ಕಳ ಮೇಲೆ ಹೇರಬಾರದು. ಜೊತೆಗೆ ವಿದ್ಯಾರ್ಥಿಗಳಿಗೆ ಅವರ ಸಾಮಥ್ರ್ಯ ಮೀರಿ ಮಕ್ಕಳಿಗೆ ಸಾಧಿಸಲಾಗದನ್ನು ಅವರ ಮೇಲೆ ಹೇರಬಾರದು. ಹಿಂದೆ ವಿದ್ಯಾರ್ಥಿಗಳು ಶಿಕ್ಷಕರು ಮತ್ತು ಕುಟುಂಬದೊಂದಿಗೆ ಸಂಪರ್ಕವಿರುತ್ತಿತ್ತು. ಆದ್ದರಿಂದ ಎಲ್ಲರೂ ವಿದ್ಯಾರ್ಥಿಗಳ ಆಸೆ ಆಕಾಂಕ್ಷೆಗಳನ್ನು ಅರಿಯಲು ಪ್ರಯತ್ನಿಸಬೇಕು ಎಂದು ಅವರು ಸಲಹೆ ಮಾಡಿದರು.  

ಕ್ರೀಡೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳು ಸಾಧನೆ ಮಾಡಿದ್ದಾರೆ. ಪರೀಕ್ಷೆ ಫಲಿತಾಂಶದಲ್ಲಿಯೂ ಸಹ ಬಾಲಕಿಯರೇ ಮುಂದಿದ್ದಾರೆ. ಹೆಣ್ಣು ಮಕ್ಕಳ ಸಾಧನೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ ಎಂದರು. 

ಹೀಗೆ ಹಲವಾರು ಮಾಹಿತಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರ ಜೊತೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರು  ಹಂಚಿಕೊಂಡರು. ಮಡಿಕೇರಿ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಅರ್ಜುನ್ ಸಿಂಗ್, ವಿದ್ಯಾರ್ಥಿಗಳು ಇತರರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು