9:05 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪರಿಸರ ದಿನದಂದು ರಾಜ್ಯದ 972 ಸ್ಥಳಗಳಲ್ಲಿ 50900 ಗಿಡಗಳನ್ನು ನೆಟ್ಟ ಎಬಿವಿಪಿ ಕಾರ್ಯಕರ್ತರು !

06/06/2021, 08:47

ಮಂಗಳೂರು(reporterkarnataka news):ಎಬಿವಿಪಿ  ಕರ್ನಾಟಕ ವತಿಯಿಂದ ಜೂನ್  5 ವಿಶ್ವ ಪರಿಸರ ದಿನದಂದು ಪ್ರಾರಂಭವಾದ ಕಾರ್ಯಕ್ರಮ , ಆಕ್ಸಿಜೆನ್ ಚಾಲೆಂಜ್ ಹೆಸರಿನಲ್ಲಿ ಕರ್ನಾಟಕದ 31 ಜಿಲ್ಲೆಗಳಲ್ಲಿ  972 ಸ್ಥಳಗಳಲ್ಲಿ 45000 ಕಾರ್ಯಕರ್ತರು 50900 ಗಿಡಗಳನ್ನು ನೆಟ್ಟಿದ್ದಾರೆ. 

ಒಬ್ಬರು  5 ಗಿಡಗಳನ್ನ,  5 ಲಕ್ಷ ಗಿಡಗಳನ್ನು, 5 ದಿನಗಳಲ್ಲಿ ನೆಡಬೇಕು ಹಾಗೂ ಒಂದು ವರ್ಷ ಸಂಪೋಷಣೆ ಮಾಡಬೇಕೆನ್ನುವ ಕಾರ್ಯಕ್ರಮಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ಐಎಎಸ್ ಆಫೀಸರ್ ಗಳು,  ಪೊಲೀಸ್ ಅಧಿಕಾರಿಗಳು,  ಸ್ವಾಮೀಜಿಗಳು, ವಿವಿ ಕುಲಪತಿಗಳು, ಸಿಂಡಿಕೇಟ್ ಸದಸ್ಯರು, ಅನೇಕ ಗಣ್ಯ ವ್ಯಕ್ತಿಗಳು, ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿ ಈ ಅಭಿಯಾನಕ್ಕೆ ಸಹಕರಿಸಿದ್ದಾರೆ. 

ಮುಂದಿನ 5 ದಿನಗಳಲ್ಲಿ 5 ಲಕ್ಷ ಗುರಿಯನ್ನು ತಲುಪುವ ಹಿನ್ನೆಲೆಯಲ್ಲಿ, ಸಾರ್ವಜನಿಕರು, ವಿದ್ಯಾರ್ಥಿಗಳು, ಈ ಅಭಿಯಾನದಲ್ಲಿ ಪಾಲ್ಗೋಳ್ಳುವ ಮೂಲಕ ಪ್ರಕೃತಿಮಾತೆಯ ಈ ಅರ್ಥಪೂರ್ಣ ಕಾರ್ಯಕ್ಕೆ  ಸಹಕಾರ ನೀಡಬೇಕೆಂದು  ವಿನಂತಿಸಿಕೊಳ್ಳುತ್ತೇವೆ ಎಂದು ಮಂಗಳೂರಿನಲ್ಲಿ ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ  ಮಾಧ್ಯಗಳಿಗೆ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು