11:43 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪರಿಸರ ಮತ್ತು ನೀರಿನ ಶುಚಿತ್ವ ಕಾಪಾಡುವ ಮೂಲಕ ಮಲೇರಿಯಾ ಪಿಡುಗು ನಿವಾರಣೆ ಸಾಧ್ಯ

25/06/2021, 08:03

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾವಿರುವ ಸುತ್ತಮುತ್ತಲಿನ ಪರಿಸರ ಹಾಗೂ ನೀರಿನ ಶುಚಿತ್ವ ಕಾಪಾಡಿಕೊಳ್ಳುವ ಮುಖಾಂತರ ಮಲೇರಿಯಾ ರೋಗದ ಪಿಡುಗನ್ನು ತೊಲಗಿಸಲು ಮುಂಜಾಗೃತ ಕ್ರಮ ವಹಿಸುವಂತೆ ಮಲೇರಿಯಾ ಜಿಲ್ಲಾ ನಿರ್ಮೂಲನಾ ಅಧಿಕಾರಿಗಳಾದ ಭವಾನಿಶಂಕರ್ ಕರೆ ನೀಡಿದರು.

ಅವರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಾಗಮಂಗಲದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಂಡ್ಯ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಮಲೇರಿಯಾ ವಿರೋಧಿ ಮಾಸಾಚರಣೆ  ಹಾಗೂ ಶ್ರೀ ಕ್ಷೇತ್ರದಿಂದ ಸಂಘಗಳ ಲಾಭಾಂಶ ವಿತರಣೆ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾಡಿದರು.

ನಮ್ಮ ಮನೆಗಳ ಹಾಗೂ ನಾವಿರುವ ವಾಸಸ್ಥಳದಲ್ಲಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತೆ ಕೈಗೊಂಡು ಮುಂಗಾರಿನ ಸಂದರ್ಭದಲ್ಲಿ ಆಗುವ ತೊಂದರೆಗಳನ್ನು ಜನರಲ್ಲಿ ಜಾಗೃತಿ ಮೂಡಿಸಿದರು.  ಮತ್ತೊಮ್ಮೆ ತಾವುಗಳು ಶುಚಿತ್ವವನ್ನು ಕಾಪಾಡಿಕೊಂಡು ಸೊಳ್ಳೆಗಳ ನಿರ್ಮೂಲನೆ ಮಾಡಿ ಮುಂಬರುವ ರೋಗಗಳನ್ನು ತಡೆಯಲು ಸಾಧ್ಯವೆಂದು ತಿಳಿಸಿದರು.

ಶ್ರೀ ಕ್ಷೇತ್ರ ತಾಲ್ಲೂಕು ಕ್ಷೇತ್ರ ಅಧಿಕಾರಿ ಹೇಮಲತಾ ಹೆಗ್ಗಡೆಯವರು ಮಾತನಾಡಿದರು .
ತಾಲ್ಲೂಕು ದಂಡಾಧಿಕಾರಿಗಳಾದ ಕುಂಞಿ ಅಹಮದ್ ಕಾರ್ಯಕ್ರಮದ ಉದ್ಘಾಟಿಸಿ ಆರೋಗ್ಯ ಸಿಬ್ಬಂದಿಗಳಿಗೆ ಬ್ಯಾಗ್ ವಿತರಣೆ ಮಾಡಿದರು. ತಾಲ್ಲೂಕು ಆರೋಗ್ಯಾಧಿಕಾರಿ ಗಳಾದ ರಮೇಶ್ ಸಸಿ ವಿತರಣೆ ಮಾಡಿದರು. ಪುರಸಭಾ ಅಧ್ಯಕ್ಷರಾದ ಆಶಾ, ವೇಣುಗೋಪಾಲ್ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು