9:41 AM Thursday4 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಪರಿಸರ ಪ್ರವಾಸೋದ್ಯಮಕ್ಕೆ ಜಿಲ್ಲೆಯಲ್ಲಿ ಆದ್ಯತೆ: ಸಂಸದ ನಳಿನ್ ಕುಮಾರ್ ಕಟೀಲ್

10/01/2022, 15:19

ಮಂಗಳೂರು(reporterkarnataka.com): ಪ್ರಕೃತಿ ಮತ್ತು ಪರಿಸರವನ್ನು ಸಂರಕ್ಷಿಸುವ ಪರಿಸರ ಪ್ರವಾಸೋದ್ಯಮಕ್ಕೆ ಜಿಲ್ಲೆಯಲ್ಲಿ ಆದ್ಯತೆ ನೀಡಲಾಗುತ್ತಿದ್ದು, ಅದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ಭಾನುವಾರ ಈ ಬಗ್ಗೆ ತಣ್ಣೀರು ಬಾವಿಯಲ್ಲಿರುವ ಅರಣ್ಯ ಇಲಾಖೆಯಲ್ಲಿ ಜನಪ್ರತಿನಿಧಿಗಳು‌ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದರು. 

ಸಸಿಹಿತ್ಲು ಹಾಗೂ ತಣ್ಣೀರುಬಾವಿ ಕಡಲ ತೀರಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ, ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ ವತಿಯಿಂದ ಪ್ರವಾಸಿಗರ ಅನುಕೂಲಕ್ಕೆ ಪ್ರಕೃತಿ ಮತ್ತು ಪರಿಸರಕ್ಕೆ ಅನುಕೂಲವಾಗುವ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಮೂಲಭೂತ ಸೌಕರ್ಯಗಳು, ಸರ್ಫಿಂಗ್, ಪ್ರವಾಸಿಗರನ್ನು ಆಕರ್ಷಿಸುವ ಇತ್ಯಾದಿ ಚಟುವಟಿಕೆಗಳಿಗೆ ಕರಾವಳಿ ನಿಯಂತ್ರಣ ವಲಯದ ನಿಯಮಗಳು (ಸಿಆರ್ ಝಡ್)  ಉಲ್ಲಂಘನೆಯಾಗದಂತೆ ಅಭಿವೃದ್ಧಿಗೆ ಕ್ರಮವಹಿಸುವಂತೆ ಅವರು ತಿಳಿಸಿದರು.

ಇದಕ್ಕೂ ಮುನ್ನ ಅವರು ಸಸಿಹಿತ್ಲು, ತಣ್ಣೀರು ಬಾವಿ ಕಡಲ ತೀರಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಡಾ. ವೈ.ಭರತ್ ಶೆಟ್ಟಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.‌‌, ಜನಪ್ರತಿನಿಧಿಗಳು ಹಾಗೂ ಇಲಾಖೆಗಳ ಅಧಿಕಾರಿಗಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು