ಇತ್ತೀಚಿನ ಸುದ್ದಿ
ಪರಿಸರ ಸಮತೋಲನ ಕಾಪಾಡದಿದ್ದರೆ ಗಂಡಾಂತರ ಖಚಿತ: ಶಾಸಕ ಸುರೇಶ್ ಗೌಡ ಎಚ್ಚರಿಕೆ
17/06/2021, 07:40
ಡಿ.ಆರ್. ಜಗದೀಶ್ ನಾಗಮಂಗಲ ಮಂಡ್ಯ
info.reporterkarnataka@gmail.com
ಪರಿಸರ ಸಮತೋಲನ ಕಾಪಾಡದಿದ್ದರೆ ಮುಂದಿನ ದಿನಗಳಲ್ಲಿ ಗಂಡಾಂತರ ಎದುರಾಗಲಿದೆ. ನಾವುಗಳು ಪರಿಸರವನ್ನು ಸಂರಕ್ಷಿಸಿ ಬೆಳೆಸುವುದರಿಂದ ಮುಂದೆ ಆಗುವ ಅನಾಹುತ ತಪ್ಪಿಸಬಹುದೆಂದು ಶಾಸಕ ಸುರೇಶ್ ಗೌಡ ಹೇಳಿದರು.
ನಾಗಮಂಗಲ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾಮಾಜಿಕ ಅರಣ್ಯ ಇಲಾಖೆ,
ನಾಗಮಂಗಲ ಸುಧಾಮೂರ್ತಿ ಮತ್ತು ಜನನಿ ಸಂಸ್ಥೆ ಹಾಗೂ ವಿಶ್ವ ಜಾನಿ ಸೇವಾ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು.
ಪ್ರಸ್ತುತ ಸನ್ನಿವೇಶವನ್ನು ಗಮನಿಸಿ ಪ್ರತಿಯೊಬ್ಬರು ಗಿಡ-ಮರಗಳನ್ನು ಬೆಳೆಸುವ ಮುಖಾಂತರ ಪರಿಸರ ಬಗ್ಗೆ ಕಾಳಜಿ ವಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.
ಪ್ರತಿಯೊಬ್ಬರಿಗೂ ಪರಿಸರ ಬಗ್ಗೆ ಕಾಳಜಿ ಇಲ್ಲದಿದ್ದರೆ ಮುಂದೊಂದು ದಿನ ಗಂಡಾಂತರ ಆಗುವುದರಲ್ಲಿ ಅನುಮಾನವಿಲ್ಲ. ಪ್ರತಿಯೊಬ್ಬರು ತಮ್ಮ ಆತ್ಮಸಾಕ್ಷಿಯ ಪರವಾಗಿ ಪರಿಸರ ಸಂರಕ್ಷಿಸುವ ಮುಖಾಂತರ ಮುಂದಿನ ತಲೆಮಾರಿಗೆ ಪರಿಸರವನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಅಪ್ಪಾಜಿ ಗೌಡ ನುಡಿದರು.
ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ಸತೀಶ್, ಎಪಿಎಂಸಿ ಅಧ್ಯಕ್ಷ ರಮೇಶ್, ಜಿಲ್ಲಾ ಪರಿಸರ ಸಂರಕ್ಷಣಾಧಿಕಾರಿ ವೆಂಕಟೇಶ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಎಪಿಎಂಸಿ ಸಿಬ್ಬಂದಿ ವರ್ಗದವರು ಹಾಜರಿದ್ದರು.