5:09 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

ಪರಿಶಿಷ್ಟ ಜಾತಿ- ಪಂಗಡಗಳ ಉನ್ನತೀಕರಣಕ್ಕೆ ಬಿಜೆಪಿ ಸರಕಾರದಿಂದ ವಿವಿಧ ಯೋಜನೆ: ಶಾಸಕ ವೇದವ್ಯಾಸ ಕಾಮತ್

04/12/2022, 14:38

ಮಂಗಳೂರು(reporterkarnataka.com): ರಾಜ್ಯ ಸರಕಾರದಿಂದ ಪರಿಶಿಷ್ಟ ಜಾತಿ ಪಂಗಡಗಳ ಉನ್ನತೀಕರಣಕ್ಕೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕಾಲೋನಿಗಳ ಅಭಿವೃದ್ಧಿ, ಮೀಸಲಾತಿ ಹೆಚ್ಚಳ ಸೇರಿದಂತೆ ಅವಶ್ಯಕ ಬದಲಾವಣೆಗಳನ್ನು ತಂದಿರುವುದು ನಮ್ಮ ಸರಕಾರ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ‌.

ನಗರ ಶಿವಭಾಗ್ ವಾರ್ಡಿನ ಕುದ್ಕೋರಿಗುಡ್ಡೆ ಕಾಲೋನಿ ಬಳಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸರಕಾರ ಆಡಳಿತಕ್ಕೆ ಬಂದ ಬಳಿಕ ಪ್ರತಿಯೊಂದು ಸಮುದಾಯಗಳ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದೆ. ನಗರದ ಅಭಿವೃದ್ಧಿಗೆ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ಅನುದಾನ ಬಿಡುಗಡೆಗೊಳಿಸುವ ಮೂಲಕರಾಜ್ಯ ಸರಕಾರದಿಂದ ಪರಿಶಿಷ್ಟ ಜಾತಿ ಪಂಗಡಗಳ ಉನ್ನತೀಕರಣಕ್ಕೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕಾಲೋನಿಗಳ ಅಭಿವೃದ್ಧಿ, ಮೀಸಲಾತಿ ಹೆಚ್ಚಳ ಸೇರಿದಂತೆ ಅವಶ್ಯಕ ಬದಲಾವಣೆಗಳನ್ನು ತಂದಿರುವುದು ನಮ್ಮ ಸರಕಾರ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ‌.

ನಗರದ ಶಿವಭಾಗ್ ವಾರ್ಡಿನ ಕುದ್ಕೋರಿಗುಡ್ಡೆ ಕಾಲೋನಿ ಬಳಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸರಕಾರ ಆಡಳಿತಕ್ಕೆ ಬಂದ ಬಳಿಕ ಪ್ರತಿಯೊಂದು ಸಮುದಾಯಗಳ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದೆ. ನಗರದ ಅಭಿವೃದ್ಧಿಗೆ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ಅನುದಾನ ಬಿಡುಗಡೆಗೊಳಿಸುವ ಮೂಲಕ ವಿಶಿಷ್ಟ ಕೊಡುಗೆ ನೀಡಿದೆ ಎಂದರು.

ಕುದ್ಕೋರಿಗುಡ್ಡೆಯ ಕಾಲೋನಿ ಅಭಿವೃದ್ಧಿಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 75 ಲಕ್ಷ ರೂಪಾಯಿ ಬಿಡುಗಡೆಗೊಳಿಸಲಾಗಿದೆ. ಈ ಭಾಗದ ಜನರ ಬಹು ಸಮಯದ ಬೇಡಿಕೆಗಳನ್ನು ಪೂರೈಸಲು ಅನುದಾನ ಒದಗಿಸಲಾಗಿದ್ದು ಅತ್ಯಂತ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಕಾವ್ಯಾ ನಟರಾಜ್ ಆಳ್ವ, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಶಕಿಲಾ ಕಾವಾ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ನವೀನ್ ಶೆಣೈ, ಯೋಗೀಶ್ ಶೆಣೈ,ನಾಗೇಶ್ ಕುದುಕೋರಿಗುಡ್ಡೆ, ರಾಧಾಕೃಷ್ಣ ಕುದುಕೋರಿಗುಡ್ಡೆ, ಮಹಾಬಲ ಸಾಲ್ಯಾನ್, ಚೇತನ್, ಪ್ರಕಾಶ್, ವಿವೇಕ್, ವಸಂತಿ, ಯಶೋಧ, ಹರಿನಾಕ್ಷಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು