11:48 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪಶುಸಂಗೋಪನಾ ಮೂಲಸೌಕರ್ಯ ಅಭಿವೃದ್ಧಿ ನಿಧಿ ಯೋಜನೆ 2 ವರ್ಷಗಳವರೆಗೆ ವಿಸ್ತರಿಸಲು ಮನವಿ

10/05/2023, 20:50

ಮಂಗಳೂರು(reporterkarnataka.com): ಕರ್ನಾಟಕ ಪೌಲ್ಟ್ರಿ ಫಾರ್ಮರ್ ಆ್ಯಂಡ್ ಬ್ರೀಡರ್ಸ್ ಅಸೋಸಿಯೇಶನ್ ( ಕೆಪಿಎಫ್‍ಬಿಎ ), ಮಹಾರಾಷ್ಟ್ರದ ಪೌಲ್ಟ್ರಿ ಫಾರ್ಮರ್ ಆ್ಯಂಡ್ ಬ್ರೀಡರ್ಸ್ ಅಸೋಸಿಯೇಶನ್, ಪಶ್ಚಿಮ ಬಂಗಾಳ ಪೌಲ್ಟ್ರಿ ಫೆಡರೇಶನ್ ಮತ್ತು ವೆಂಟ್ರಲ್ ಇಂಡಿಯಾ ವೆಂಕೋಬ್ ಬ್ರಾಯ್ಲರ್ ಬ್ರೀಡರ್ಸ್ ಹ್ಯಾಚರೀಸ್ ಅಸೋಸಿಯೇಷನ್ ಅವರು ಭಾರತ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ಕಾರ್ಯದರ್ಶಿ ಡಾ.ರಾಜೇಶ್ ಕುಮಾರ್ ಸಿಂಗ್ ಅವರಿಗೆ ಪತ್ರ ಬರೆದು, ಪಶುಸಂಗೋಪನಾ ಮೂಲಸೌಕರ್ಯ ಅಭಿವೃದ್ಧಿ ನಿಧಿ ಯೋಜನೆಯನ್ನು ಇನ್ನೂ ಎರಡು ವರ್ಷಗಳವರೆಗೆ ವಿಸ್ತರಿಸುವಂತೆ ಮನವಿ ಮಾಡಿದೆ.
ಕೆಪಿಎಫ್‍ಬಿಎ ಅಧ್ಯಕ್ಷ ಡಾ.ಬಿ.ಸುಶಾಂತ್ ರೈ ಅವರು ಮಾತನಾಡಿ, ಆತ್ಮನಿರ್ಭರ ಭಾರತ ಅಭಿಯಾನ ಉತ್ತೇಜನ ಪ್ಯಾಕೇಜ್‍ನ ಭಾಗವಾಗಿ ಪ್ರಾರಂಭಿಸಲಾದ ಈ ಯೋಜನೆಯು ಫೀಡ್ ಮಿಲ್‍ಗಳು, ಹ್ಯಾಚರಿಗಳು ಮತ್ತು ಸಂಸ್ಕರಣಾ ಘಟಕಗಳು ಸೇರಿದಂತೆ ಪಶುಸಂಗೋಪನಾ ಮೂಲಸೌಕರ್ಯಗಳಲ್ಲಿ ಹೂಡಿಕೆಗೆ ಪ್ರೋತ್ಸಾಹ ನೀಡುವ ಮೂಲಕ ರೈತರಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಈ ಯೋಜನೆಯ ಮೂಲಕ ನೀಡಲಾಗುವ ಮೂರು ಪ್ರತಿಶತದಷ್ಟು ಬಡ್ಡಿ ಸಹಾಯಧನ ರೈತರಿಗೆ ಗಮನಾರ್ಹ ಉತ್ತೇಜನವನ್ನು ನೀಡಿದೆ. ಮಾ.31, 2023 ರಂದು ಕೊನೆಗೊಂಡ ಯೋಜನೆಯ ವಿಸ್ತರಣೆಯು ಮೂಲಸೌಕರ್ಯ ಯೋಜನೆಗಳನ್ನು ಸ್ಥಾಪಿಸುವುದರಿಂದ ಇನ್ನೂ ಅನೇಕ ರೈತರಿಗೆ ಪ್ರಯೋಜನ ಪಡೆಯಲು ಸಹಾಯ ಮಾಡುತ್ತದೆ ಎಂದರು.
ಈ ಉಪಕ್ರಮವು ರೈತರು ಮತ್ತು ಗ್ರಾಹಕರಿಗೆ ಅತ್ಯಗತ್ಯವಾದ ಗುಣಮಟ್ಟದ ಪ್ರಾಣಿ ಪ್ರೋಟಿನ್‍ಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಸಹಾಯ ಮಾಡುತ್ತದೆ. ಈ ಯೋಜನೆಯನ್ನು ವಿಸ್ತರಿಸುವ ಮೂಲಕ, ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವುದರ ಜತೆಗೆ ಉದ್ಯೋಗವನ್ನು ಸೃಷ್ಟಿಸುವ ಮೂಲಸೌಕರ್ಯ ಯೋಜನೆಗಳನ್ನು ಸ್ಥಾಪಿಸಲು ಸರ್ಕಾರವು ಉದ್ಯಮಿಗಳಿಗೆ ಸಹಾಯ ಮಾಡುತ್ತದೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು