ಇತ್ತೀಚಿನ ಸುದ್ದಿ
ಪತಿಯಿಂದ ಪತ್ನಿಯ ಅಪಹರಣ: ಮನೆಯಿಂದ ಹೊರ ಹಾಕಿದ ಮಡದಿಯನ್ನು ಸಂಬಂಧಿಕರ ಮನೆಯಿಂದ ಕಿಡ್ನಾಪ್
14/01/2025, 21:19
ದಾವಣಗೆರೆ(reporterkarnataka.com): ಪತ್ನಿಯನ್ನು ಪತಿಯೇ ಅಪಹರಿಸಿರುವ ವಿಲಕ್ಷಣ ಘಟನೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ನಡೆದಿದೆ
ಹಾಡಹಗಲೇ ಸಂಬಂಧಿಕರ ಮನೆಯಲ್ಲಿದ್ದ ಪತ್ನಿ ಅನುಂಧತಿಯನ್ನು ಪತಿ ಕಾರ್ತಿಕ್ ಅಪಹರಣ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆಯ ಕುಟುಂಬಸ್ಥರು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲು ಮಾಡಿದ್ದಾರೆ. ಅಪಹರಣದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನರಸಿಪುರ ಗ್ರಾಮದ ಕಾರ್ತಿಕ್ ಜೊತೆ ನಾಲ್ಕು ವರ್ಷಗಳ ಹಿಂದೆ ಅನುಂಧತಿಗೆ ವಿವಾಹ ಮಾಡಲಾಗಿತ್ತು. ದಂಪತಿಗೆ ಗಂಡು ಮಗು ಇದೆ. ಆರು ತಿಂಗಳ ಹಿಂದೆ ಪತಿ ಕಾರ್ತಿಕ್ ಮತ್ತು ಕುಟುಂಬಸ್ಥರು ಅನುಂಧತಿ ಮತ್ತು ಮಗನನ್ನು ಮನೆಯಿಂದ ಹೊರ ಹಾಕಿದ್ದರು. ಇದರಿಂದ ಅನುಂಧತಿ ತನ್ನ ಮಗನೊಂದಿಗೆ ಹೊನ್ನಾಳಿಯ ದಿಡಗೂರು ಗ್ರಾಮದ ಅತ್ತೆ ಮನೆ ಸೇರಿದ್ದರು. ಜ.12 ರಂದು ಪತಿ ಕಾರ್ತಿಕ್ ಮತ್ತು ಕುಟುಂಬಸ್ಥರು ಮನೆಗೆ ನುಗ್ಗಿ ಅನುಂಧತಿಯನ್ನು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.