11:34 PM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಪತಿಯಿಂದ ಪತ್ನಿಯ ಅಪಹರಣ: ಮನೆಯಿಂದ ಹೊರ ಹಾಕಿದ ಮಡದಿಯನ್ನು ಸಂಬಂಧಿಕರ ಮನೆಯಿಂದ ಕಿಡ್ನಾಪ್

14/01/2025, 21:19

ದಾವಣಗೆರೆ(reporterkarnataka.com): ಪತ್ನಿಯನ್ನು ಪತಿಯೇ ಅಪಹರಿಸಿರುವ ವಿಲಕ್ಷಣ ಘಟನೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ನಡೆದಿದೆ
ಹಾಡಹಗಲೇ ಸಂಬಂಧಿಕರ ಮನೆಯಲ್ಲಿದ್ದ ಪತ್ನಿ ಅನುಂಧತಿಯನ್ನು ಪತಿ ಕಾರ್ತಿಕ್ ಅಪಹರಣ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆಯ ಕುಟುಂಬಸ್ಥರು ಹೊನ್ನಾಳಿ ಪೊಲೀಸ್​ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲು ಮಾಡಿದ್ದಾರೆ.‌ ಅಪಹರಣದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನರಸಿಪುರ ಗ್ರಾಮದ ಕಾರ್ತಿಕ್ ಜೊತೆ ನಾಲ್ಕು ವರ್ಷಗಳ ಹಿಂದೆ ಅನುಂಧತಿಗೆ ವಿವಾಹ ಮಾಡಲಾಗಿತ್ತು. ದಂಪತಿಗೆ ಗಂಡು ಮಗು ಇದೆ. ಆರು ತಿಂಗಳ ಹಿಂದೆ ಪತಿ ಕಾರ್ತಿಕ್​ ಮತ್ತು ಕುಟುಂಬಸ್ಥರು ಅನುಂಧತಿ ಮತ್ತು ಮಗನನ್ನು ಮನೆಯಿಂದ ಹೊರ ಹಾಕಿದ್ದರು. ಇದರಿಂದ ಅನುಂಧತಿ ತನ್ನ ಮಗನೊಂದಿಗೆ ಹೊನ್ನಾಳಿಯ ದಿಡಗೂರು ಗ್ರಾಮದ ಅತ್ತೆ ಮನೆ ಸೇರಿದ್ದರು. ಜ.12 ರಂದು ಪತಿ ಕಾರ್ತಿಕ್​ ಮತ್ತು ಕುಟುಂಬಸ್ಥರು ಮನೆಗೆ ನುಗ್ಗಿ ಅನುಂಧತಿಯನ್ನು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು