1:19 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ವಿರೋಧವಿಲ್ಲ: ಕಾಂಗ್ರೆಸ್ ಉಪ ನಾಯಕ ಯು.ಟಿ.ಖಾದರ್

21/03/2022, 00:07

ಬೆಂಗಳೂರು(reporterkarnataka.com):

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ನಮ್ಮ ವಿರೋಧವಿಲ್ಲ, ಎಲ್ಲಾ ಧರ್ಮಗಳನ್ನೂ ನಾವು ಸಮಾನವಾಗಿ ಗೌರವಿಸುತ್ತೇವೆ ಎಂದು ಮಾಜಿ ಸಚಿವ ಯುಟಿ.ಖಾದರ್ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್‌, ಭಗವದ್ಗೀತೆಯ ಮೌಲ್ಯಗಳು ಜನರ ಹೃದಯ ಸ್ವಚ್ಛಗೊಳಿಸುತ್ತದೆ. ಅದರಂತೆ ಕುರಾನ್, ಬೈಬಲ್ ಸೇರಿದಂತೆ ಎಲ್ಲ ಧರ್ಮದವರ ಗ್ರಂಥಗಳ ಬಗ್ಗೆ ಮಕ್ಕಳಿಗೆ ಪರಿಚಯವಾಗಲಿ ಎಂಬುದು ನಮ್ಮ ಒತ್ತಾಯ. ಮಹಾನ್ ವ್ಯಕ್ತಿಗಳಾದ ಶ್ರಿ ಬಸವಣ್ಣನವರ ಸಾಹಿತ್ಯ, ವಚನಗಳು, ಗ್ರಂಥಗಳ ಬಗ್ಗೆ ಹಾಗೂ ಕೋಟೆ ಚೆನ್ನಯ್ಯ ಅವರ ವ್ಯಕ್ತಿತ್ವವೂ ಮಕ್ಕಳಿಗೆ ಪರಿಚಯವಾಗಲಿ. ಆದರೆ ಯುವಜನರು, ವಿದ್ಯಾರ್ಥಿಗಳಲ್ಲಿ ಕೋಮುಭಾವನೆ ಬೆಳೆಯದಂತೆ ಎಚ್ಚರ ವಹಿಸಬೇಕು ಎಂದರು.

ಹಿಜಾಬ್ ವಿಚಾರವನ್ನು ಅನಗತ್ಯವಾಗಿ ಚರ್ಚೆಗೆಳೆದು ತರಲಾಗಿದೆ. ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಒಟ್ಟು 83 ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ಮಾತ್ರವೇ ಹಿಜಾಬ್ ಗೆ ಒತ್ತಾಯಿಸಿದ್ದರು. ಕೆಲವರು ಅದನ್ನೇ ದೊಡ್ಡ ರಾದ್ದಾಂತ ಮಾಡಿದರು. ಮಕ್ಕಳಲ್ಲಿನ ಕೋಮು ಸೌಹಾರ್ದಕ್ಕೆ ದಕ್ಕೆಯುಂಟುಮಾಡಬಾರದು. ಈ ರೀತಿ ಮಾಡಿದರೆ ಮಕ್ಕಳ‌ ಹಾಗೂ ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ ಎಂದರು. ಬಳ್ಳಾರಿ ನಗರದ ಮಹಾ ಜನತೆ ಆರ್ಶಿವಾದದಿಂದ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ದೊರೆತಿದ್ದು, ಪಾಲಿಕೆ ಚುಕ್ಕಾಣಿ ಹಿಡಿದಿದೆ. ಮೇಯರ್ ಆಗಿ ರಾಜೇಶ್ವರಿ ಸುಬ್ಬರಾಯಡು ಹಾಗೂ ಉಪ‌ಮೇಯರ್ ಮಾಲಾನ್ ಬೀ ಅವರು ಆಯ್ಕೆಯಾಗಿದ್ದು, ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುವೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಮಹ್ಮದ್ ರಫೀಕ್, ಚುನಾವಣಾ ವೀಕ್ಷಕರಾದ ಚಂದ್ರಪ್ಪ, ಮಂಜುನಾಥ್ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು