6:24 PM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು ನನ್ನನ್ನು ಕರೆಯುತ್ತಾರೆ: ಬಿಜೆಪಿ ಕುರಿತು ಯತ್ನಾಳ್ ನುಡಿ

02/04/2026, 19:45

ವಿಜಯಪುರ(reporterkarnataka.com): ದಾವಣಗೆರೆ-ಬಾಗಲಕೋಟೆ ಉಪ ಚುನಾವಣಾ ಕಣ ಕಾವೇರುತ್ತಿದೆ. ಈ ನಡುವೆ ಸಚಿವ ಎಂ.ಬಿ. ಪಾಟೀಲ್ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ಮುಂದುವರಿದಿದೆ.’ಯತ್ನಾಳ್‌ಗೆ ಸ್ವಾಭಿಮಾನವಿದ್ದರೆ ಬಿಜೆಪಿಯನ್ನು ಸೋಲಿಸಲಿ’ ಎಂಬ ಸಚಿವರ ಸವಾಲಿಗೆ ಯತ್ನಾಳ್ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ಬಿಜೆಪಿ ಸೇರುವ ಅವಶ್ಯಕತೆ ನನಗಿಲ್ಲ‌ ಎಂದು ಯತ್ನಾಳ್ ನುಡಿದಿದ್ದಾರೆ.

ಇಂದು ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್ ಅವರು, ಬಿಜೆಪಿಯಲ್ಲಿನ ಬೆಳವಣಿಗೆಗಳ ಬಗ್ಗೆ ಮಾತನಾಡಿದರು. ನಾನು ಯಾರ ಮುಂದೆಯೂ ಹೋಗಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ಬೇಡುವುದಿಲ್ಲ. ಹನುಮ ಜಯಂತಿಯ ಈ ಪವಿತ್ರ ದಿನದಂದು ಆಂಜನೇಯನ ಸಾಕ್ಷಿಯಾಗಿ ಹೇಳುತ್ತೇನೆ, ಒಂದು ದಿನ ಅವರೇ(ಬಿಜೆಪಿ) ಅಪ್ಪ-ಮಕ್ಕಳನ್ನು (ಯಡಿಯೂರಪ್ಪ ಕುಟುಂಬ) ಕೈಬಿಟ್ಟು ನನ್ನನ್ನು ಕರೆಯುತ್ತಾರೆ. ನಾನು ನಾಟಕವಾಡಿ ಪಕ್ಷದಲ್ಲಿ ಇರುವವನಲ್ಲ ಎಂದು ಗುಡುಗಿದರು.

*ನಾನು ಅಧಿಕಾರಕ್ಕೆ ಬಂದರೆ ಯೋಗಿ ಮಾದರಿ ಆಡಳಿತ ನಡೆಸ್ತೇನೆ*
ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಯತ್ನಾಳ್ ಅವರು, ‘ಒಂದು ವೇಳೆ ನಾನು ಮುಖ್ಯಮಂತ್ರಿಯಾದರೆ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಅವರ ಮಾದರಿಯಲ್ಲೇ ಆಡಳಿತ ನಡೆಸುತ್ತೇನೆ. ನನ್ನ ಮೊದಲ ಸಂಪುಟ ಸಭೆಯಲ್ಲೇ ಮುಸ್ಲಿಂ ಸಮುದಾಯವನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕುತ್ತೇನೆ. ಅವರ ಬದಲಿಗೆ ನಿಜವಾದ ಅಲ್ಪಸಂಖ್ಯಾತರಾದ ಮರಾಠರು, ಬ್ರಾಹ್ಮಣರು ಮತ್ತು ಕ್ಷತ್ರಿಯರಿಗೆ ಆ ಸ್ಥಾನಮಾನ ನೀಡುತ್ತೇನೆ’ ಎಂದು ಸ್ಫೋಟಕ ಹೇಳಿಕೆ ನೀಡಿದರು.ಎಂ.ಬಿ. ಪಾಟೀಲ್‌ಗೆ ಯತ್ನಾಳ್ ಸವಾಲ್. ಸಚಿವ ಎಂ.ಬಿ. ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್, ‘ನನಗೆ ಸ್ವಾಭಿಮಾನದ ಪಾಠ ಮಾಡುವ ಎಂ.ಬಿ. ಪಾಟೀಲ್ ಮೊದಲು ಬಾಗೇವಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುವುದನ್ನು ನಿಲ್ಲಿಸಲಿ. ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿಯೇ ರಾತ್ರಿ ಹೊತ್ತು ಮುಸುಕು ಹಾಕಿಕೊಂಡು ಬಂದು ಪಾಟೀಲ್ ವಿರುದ್ಧ ಪ್ರಚಾರ ಮಾಡುತ್ತಾನೆ. ಇಂತಹ ಪರಿಸ್ಥಿತಿಯಲ್ಲಿರುವ ಪಾಟೀಲರಿಗೆ ನನ್ನ ಬಗ್ಗೆ ಮಾತನಾಡುವ ಹಕ್ಕಿಲ್ಲ’ ಎಂದು ವ್ಯಂಗ್ಯವಾಡಿದರು.

*ಬಾಗಲಕೋಟೆಯಲ್ಲಿ ಚರಂತಿಮಠ ಪರ ಪ್ರಚಾರ*
ವೀರಣ್ಣ ಚರಂತಿಮಠ ಅವರು ನನ್ನ ಆತ್ಮೀಯ ಸ್ನೇಹಿತರು. ಬಾಗಲಕೋಟೆಯ ಬಿಜೆಪಿ ಕಾರ್ಯಕರ್ತರು ನನ್ನನ್ನು ಪ್ರಚಾರಕ್ಕೆ ಆಹ್ವಾನಿಸಿದ್ದಾರೆ. ಹಾಗಾಗಿ ನಾನು ಅವರ ಪರವಾಗಿ ಪ್ರಚಾರಕ್ಕೆ ತೆರಳುತ್ತಿದ್ದೇನೆ ಎಂದು ತಮ್ಮ ಮುಂದಿನ ನಡೆಯನ್ನು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು