5:58 PM Sunday23 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

ಪತಿಯ ಆಪರೇಷನ್ ಗೆ ಹಣ ಹೊಂದಿಸಲು ವಿಫಲ: ಮನನೊಂದ ಸತಿ ಬಾವಿಗೆ ಹಾರಿ ಆತ್ಮಹತ್ಯೆ

14/04/2022, 23:51

ಕಾರ್ಕಳ(reporterkarnataka.com): ಪತಿಯ ಆಪರೇಷನ್ ಗೆ ಹಣ ಹೊಂದಿಸಲು ಆಗದ ಕಾರಣ ಮಹಿಳೆಯೊಬ್ಬರು ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಡಾರು ಗ್ರಾಮದ ಬಾಳೆಹಿತ್ಲು ಎಂಬಲ್ಲಿ ನಡೆದಿದೆ.

ಮೃತರನ್ನು ಅಂಡಾರು ಗ್ರಾಮದ ಬಾಳೆಹಿತ್ಲು ನಿವಾಸಿ ವನಿತಾ(45) ಎಂದು ಗುರುತಿಸಲಾಗಿದೆ. ವನಿತಾ ಅವರ ಪತಿ ಸತೀಶ್ ಎನ್. ರಾವ್ ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ಆಪರೇಷನ್ ಮಾಡಬೇಕೆಂದು ವೈದ್ಯರು ತಿಳಿಸಿದ್ದಾರೆ. ಅದರಂತೆ ಆಪರೇಷನ್ ಗೆ ಹಣದ ವ್ಯವಸ್ಥೆ ಮಾಡಲು ವನಿತಾ ಮನೆಗೆ ಬಂದಿದ್ದು, ಹಣ ಹೊಂದಿಸಲು ಆಗದ ಕಾರಣ ಮನನೊಂದು ಎ‌.13ರಂದು ಬೆಳಿಗ್ಗೆ ಮನೆಯ ಎದುರಿನ‌ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು