ಇತ್ತೀಚಿನ ಸುದ್ದಿ
ಪತ್ನಿಗೆ ಚಾಕುವಿನಿಂದ ಇರಿದು ಅಮಾನುಷವಾಗಿ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ
09/06/2023, 11:20
ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ವ್ಯಕ್ತಿಯೊಬ್ಬ ಹೆಂಡತಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಬಾಗ ತಾಲೂಕಿನ ಚಿಂಚಲಿಯಲ್ಲಿ ನಡೆದಿದೆ.
ಧರೆಪ್ಪ ಲಖಪ್ಪ ಖೋತ (36) ಹಾಗೂ ಆತನ ಪತ್ನಿ
ಉಷಾ ಖೋತ (30) ಮೃತಪಟ್ಟ ದುರ್ಧೈವಿಗಳು. ಧರೆಪ್ಪ ತನ್ನ ಹೆಂಡತಿಗೆ ಚಾಕುವಿನಿಂದ ಇರಿದು ಅಮಾನುಷವಾಗಿ ಹತ್ಯೆ ಮಾಡಿದ್ದಾನೆ. ನಂತರ ತಾನೂ ನೇಣಿಗೆ ಶರಣಾಗಿದ್ದಾನೆ. ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲಿಸುತ್ತಿದ್ದಾರೆ. ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.