4:20 AM Monday14 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಪತ್ರಕರ್ತ, ಲೇಖಕ, ಜನಪರ ಹೋರಾಟಗಾರ ಆರ್. ಜಯಕುಮಾರ್ ಇನ್ನಿಲ್ಲ

26/05/2024, 16:40

ಬೆಂಗಳೂರು(reporterkarnataka.com): ಹಿರಿಯ ಪತ್ರಕರ್ತ, ಹೋರಾಟಗಾರ ಆರ್. ಜಯಕುಮಾರ್ (64)ಅವರು ಅನಾರೋಗ್ಯದಿಂದ ಶನಿವಾರ ನಿಧನರಾದರು.
ಕೊಡಗು ಜಿಲ್ಲೆಯವರಾದ ಜಯಕುಮಾರ್ ಅವರು ಹೋರಾಟ, ಚಳವಳಿ, ಆಂದೋಲನದ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಪತ್ರಿಕೆ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ 30 ವರ್ಷಕ್ಕೂ ಹೆಚ್ಚು ಕಾಲ ಸೇವೆ ಮಾಡಿದ್ದರು.
ಜಯಕುಮಾರ್ ಅವರು ಇತ್ತೀಚೆಗೆ ಗಾಂಧಿ ಮರೆತ ನಾಡಿನಲ್ಲಿ ಮತ್ತು ಕಾಡು ಹಾದಿಯ ಬೆಳಕಿನ ಜಾಡಿನಲ್ಲಿ ಎಂಬ ಎರಡು ಪುಸ್ತಕಗಳನ್ನು ಹೊರತಂದಿದ್ದರು.
ಅವರು ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
ಅವರ ಪಾರ್ಥಿವ ಶರೀರವನ್ನು ಬೆಂಗಳೂರು ಮೆಡಿಕಲ್ ಕಾಲೇಜಿಗೆ ದಾನ ಮಾಡಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು