4:21 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಆಮಂತ್ರಣ ಪತ್ರಿಕೆ ಬಿಡುಗಡೆ

18/12/2023, 22:28

ಧರ್ಮಸ್ಥಳ(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಜ.5 ರಿಂದ ನಡೆಯಲಿರುವ ಕ್ಯಾ.ಪ್ರಾಂಜಲ್ ಗೌರವಾರ್ಥ ‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್’ ಪಂದ್ಯಾವಳಿಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಸೋಮವಾರ ಶ್ರೀಕ್ಷೇತ್ರ ಧರ್ಮ ಸ್ಥಳದಲ್ಲಿ ಬಿಡುಗಡೆ ಗೊಳಿಸಿ ಶುಭ ಹಾರೈಸಿದರು.

ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯ ದರ್ಶಿ ವೀರು ಶೆಟ್ಟಿ ,ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಹಿರಿಯ ಪತ್ರಕರ್ತರಾದ ಕೇಶವ ಕುಂದರ್, ಆರ್.ಎನ್. ಪೂವಣಿ, ಝಿ ಕನ್ನಡ ಡ್ರಾಮ ಜ್ಯೂನಿಯರ್ ಖ್ಯಾತಿಯ ರಿಷಿಕಾ ಕುಂದೇಶ್ವರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು