10:03 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪತ್ರಕರ್ತರ ಸಮಾಜಮುಖಿ ಕೆಲಸಗಳಿಂದ ಮಾದರಿ ಸಮಾಜ ನಿರ್ಮಾಣ ಸಾಧ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅಭಿಮತ

16/08/2023, 22:16

ಮಂಗಳೂರು(reporterkarnataka.com): ಪತ್ರಕರ್ತರು ಕೇವಲ ಸುದ್ದಿಮನೆಗೆ ಮಾತ್ರ ಸೀಮಿತವಾಗಿರದೇ ಸಮಾಜಮುಖಿ ಕೆಲಸಗಳನ್ನು ಮಾಡಿದಾಗ ಮಾತ್ರ ಮಾದರಿ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಪತ್ರಿಕಾ ಭವನದಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಕುತ್ಲೂರು ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ 100 ಮಕ್ಕಳಿಗೆ ಎಂಸಿಎಫ್‌ನ ಸಿಎಸ್‌ಆರ್ ನಿಧಿ ಮತ್ತು ಇನ್ನರ್‌ವೀಲ್ ಕ್ಲಬ್ ವತಿಯಿಂದ ಬಿಜೈ ಕಾಪಿಕಾಡ್ ಅಂಗನವಾಡಿಯ ಮಕ್ಕಳಿಗೆ ಬುಧವಾರ ಸಮವಸ್ತ್ರ ವಿತರಿಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು, ಕಾರ್ಯನಿರತ ಪತ್ರಕರ್ತರ ಸಂಘವು ವಿಭಿನ್ನ ಪಂಕ್ತಿ ಹಾಕಿಕೊಟ್ಟಿದ್ದು, ಇದು ರಾಜ್ಯಕ್ಕೆ ಮಾದರಿ ಆಗಿದೆ ಎಂದು ಶ್ಲಾಘಿಸಿದರು.

ಪತ್ರಕರ್ತರದು ಬರೀ ಟೀಕೆ ಮಾಡುವ ಬದಲು ಇಂತಹ ಸಕಾರಾತ್ಮಕ ಚಿಂತನೆಗಳ ಮೂಲಕ ಸಮಾಜ ಕಟ್ಟುವ ಕೆಲಸ ಶ್ಲಾಘನೀಯ. ಗ್ರಾಮ ವಾಸ್ತವ್ಯ ಮಾಡಿ, ಅಲ್ಲಿನ ಶಾಲೆಯ ಸಮಸ್ಯೆಗೆ ಪತ್ರಕರ್ತರ ಸಂಘವು ಸ್ಪಂದನೆ ಮಾಡುತ್ತಿರುವ ಕಾರ್ಯ ನಿಜಕ್ಕೂ ಉತ್ತಮ ಕೆಲಸ. ಕಾರ್ಯನಿರತ ಪತ್ರಕರ್ತರ ಸಂಘದ ಚಟುವಟಿಕೆಗಳಿಗೆ ಸರಕಾರದಿಂದ ನೆರವು ಒದಗಿಸಲು ಸದಾ ಪ್ರಯತ್ನ ಮಾಡುವುದಾಗಿ ಅವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಹಾಗೂ ಪತ್ರಕರ್ತರ ಸಂಘ ರಾಜ್ಯಕ್ಕೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಸರಕಾರ, ಶಾಸಕರು, ಜಿಲ್ಲಾಡಳಿತ ಮಾಡಬೇಕಾದ ಕೆಲಸವನ್ನು ಪತ್ರಕರ್ತರ ಸಂಘ ಮಾಡುತ್ತಿದೆ ಎಂದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಪ್ರಶ್ನೆ ಕೇಳುವುದು ಮಾತ್ರವಲ್ಲ, ಕೆಲಸ ಮಾಡಿಯೂ ತೋರಿಸುತ್ತಾರೆ ಎಂಬುದಕ್ಕೆ ಇಂತಹ ಕೆಲಸಗಳೆ ಸಾಕ್ಷಿ. ಕುತ್ಲೂರು ಶಾಲೆ ಅಭಿವೃದ್ಧಿ ಪಡಿಸುವ ಮೂಲಕ ಇದನ್ನು ಸಾಬೀತು ಮಾಡಿದ್ದಾರೆ ಎಂದರು.
ಕುತ್ಲೂರು ಉನ್ನತೀಕರಿಸಿದ ಸರಕಾರಿ ಹಿರಿಯ
ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಮಾತನಾಡಿದರು.
ಭಾರತೀಯ ಸೇನೆಗೆ ಆಯ್ಕೆಯಾದ ಕುತ್ಲೂರು ಶಾಲೆಯ ಹಳೆ ವಿದ್ಯಾರ್ಥಿ ವಿಜೇತ್ ಮಡಿವಾಳ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.
ಎಂಸಿಎಫ್ ಎಚ್‌ಆರ್ ವಿಭಾಗ ಮುಖ್ಯಸ್ಥ ಚೇತನ್ ಮೆಂಡೋನ್ಸಾ, ಇನ್ನರ್ ವೀಲ್ ಕ್ಲಬ್ ಮಂಗಳೂರು ನಾರ್ಥ್ ಅಧ್ಯಕ್ಷೆ ಗೀತಾ ಬಿ. ರೈ ಪಾಲ್ಗೊಂಡಿದ್ದರು.


ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಜಿಲ್ಲಾ ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ಜಿಲ್ಲಾ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟಾ ಉಪಸ್ಥಿತರಿದ್ದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಪುಷ್ಪರಾಜ್ ಬಿ. ಎನ್. ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು