11:17 PM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡುವ ಕೊಲ್ಲಮೊಗ್ರಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ: ಗ್ರಾಮಸ್ಥರಿಂದ ಅಹವಾಲು ಸ್ವೀಕಾರ

06/02/2024, 17:44

*ಗ್ರಾಮಸ್ಥರ ಬೇಡಿಕೆಗಳ ಪರಿಶೀಲಿಸಿ ಕ್ರಮ- ಗಾಳಿಬೀಡು-ಸುಬ್ರಹ್ಮಣ್ಯ ರಸ್ತೆ ಅಭಿವೃದ್ಧಿಗೆ ಪ್ರಯತ್ನ, ಇಕೋ ಟೂರಿಸಂ ಅಭಿವೃದ್ಧಿ*

*ಗ್ರಾಮಸ್ಥರಿಗೆ ಸಚಿವರ ಭರವಸೆ:ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಶ್ಲಾಘನೆ*

ಸುಳ್ಯ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ದ.ಕ.ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್ ಹಾಗೂ ಕೊಲ್ಲಮೊಗ್ರ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಹಕಾರದಲ್ಲಿ ಫೆ.10ರಂದು ಪತ್ರಕರ್ತರು ಗ್ರಾಮ ವಾಸ್ತವ್ಯ ನಡೆಸುವ ಕೊಲ್ಲಮೊಗ್ರ ಗ್ರಾಮಕ್ಕೆ ರಾಜ್ಯ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ ಈಶ್ವರ ಖಂಡ್ರೆ ಅವರು ಫೆ.5ರಂದು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದಲ್ಲಿ ಇರುವ ಪ್ರಮುಖ ಬೇಡಿಕೆಗಳ ಬಗ್ಗೆ ಗ್ರಾಮಸ್ಥರು ಸಚಿವರಿಗೆ ಮನವಿ ಸಲ್ಲಿಸಿದರು. ದಕ್ಷಿಣ ಕನ್ನಡ-ಕೊಡಗು ಸಂಪರ್ಕ ಕಲ್ಪಿಸುವ ಗಾಳಿಬೀಡು-ಕಡಮಕಲ್ಲು- ಸುಬ್ರಹ್ಮಣ್ಯ ರಸ್ತೆ ಅಭಿವೃದ್ಧಿ ಮಾಡಬೇಕು, ಕೊಲ್ಲಮೊಗ್ರ, ಹರಿಹರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಗ್ರೀನ್ ಟ್ರಾಕ್‌ಗಳನ್ನು ಇಕೋ ಟೂರಿಸಂ ನೆಲೆಯಲ್ಲಿ ಅಭಿವೃದ್ಧಿ ಪಡಿಸಬೇಕು. ಭಾಗಷಃ ಅರಣ್ಯ ಸಮಸ್ಯೆಯಿಂದ ಹಲವು ಕುಟುಂಬಗಳಿಗೆ ಹಕ್ಕು ಪತ್ರ ಸಿಕ್ಕಿಲ್ಲ, ಕಾಡಾನೆ ಹಾಗೂ ಇತರ ವನ್ಯ ಜೀವಿಗಳ ಹಾವಳಿಯಿಂದ ಕೃಷಿಕರು ತೀವ್ರ ಸಮಸ್ಯೆ ಎದುರಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು ಇತ್ಯಾದಿ ಮನವಿಗಳನ್ನು ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ ಅವರು ಕೊಲ್ಲಮೊಗ್ರ ಹಾಗೂ ಹರಿಹರ ಗ್ರಾಮದ‌ ಜನರು ಮುಂದಿರಿಸಿದ ಎಲ್ಲಾ ಸಮಸ್ಯೆಗಳ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಪರಿಹರಿಸಲಾಗುವುದು. ನಾಳೆ ನಡೆಯಲಿರುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು. ಮಡಿಕೇರಿ ಸಂಪರ್ಕಿಸುವ ಗಾಳಿಬೀಡು-ಸುಬ್ರಹ್ಮಣ್ಯ ರಸ್ತೆ ಅಭಿವೃದ್ಧಿಗೆ ಎಲ್ಲಾ ಪ್ರಯತ್ನಗಳನ್ನೂ ನಡೆಸಲಾಗುವುದು. ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು. ಅರಣ್ಯದಲ್ಲಿ ಹಾದು ಹೋಗುವ ರಸ್ತೆಯ ಅನುಮತಿಗಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು ಸೇರಿದಂತೆ ಎಲ್ಲಾ ಪ್ರಯತ್ನವೂ ನಡೆಸಲಾಗುವುದು.‌ ಭಾಗಷಃ ಅರಣ್ಯ ಸಮಸ್ಯೆಯಿಂದ ಹಲವು ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸಾಧ್ಯವಾಗದ ಸಮಸ್ಯೆ ಗಮನಕ್ಕೆ ಬಂದಿದೆ. ಇದರ ಪರಿಹಾರಕ್ಕೆ ಜಂಟಿ ಸರ್ವೆ ನಡೆಸುವುದು ಸೇರಿದಂತೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಗ್ರಾಮಸ್ಥರಿಗೆ ಭರವಸೆ ನೀಡಿದರು. ಮಾನವ ಮತ್ತು ಕಾಡು ಪ್ರಾಣಿಗಳ ಸಂಘರ್ಷ ಅತೀ ಹೆಚ್ಚಾಗಿದೆ. ಆನೆ ಹಾವಳಿ ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳುವ ಯೋಜನೆ ರೂಪಿಸಲಾಗಿದೆ. ರೈಲ್ವೇ ಹಳಿ ಬಳಸಿ ಬೇಲಿ ನಿರ್ಮಾಣ, ಆನೆ ಕಂದಕ, ಸೋಲಾರ್ ಬೇಲಿ ನಿರ್ಮಾಣ ಸೇರಿದಂತೆ ಯೋಜನೆ ರೂಪಿಸಲಾಗುತಿದೆ. ಆನೆ ಕಾರ್ಯಪಡೆ, ಚಿರತೆ ಕಾರ್ಯಪಡೆ ರಚಿಸಲಾಗಿದೆ ಎಂದು ವಿವರಿಸಿದ ಸಚಿವರು
ಈಕೋ ಟೂರಿಸಂ ಅಭಿವೃದ್ಧಿಗೆ ಸರಕಾರ ಎಲ್ಲಾ ರೀತಿಯ ಉತ್ತೇಜನ ನೀಡಲಾಗುತಿದೆ. ಕೊಲ್ಲಮೊಗ್ರ ಹರಿಹರ ಗ್ರಾಮ ವ್ಯಾಪ್ತಿಯಲ್ಲಿ ಗ್ರೀನ್ ಟ್ರಾಕ್‌ಗಳನ್ನು ಇಕೋ ಟೂರಿಸಂ ಯೋಜನೆಯಲ್ಲಿ ಅಭಿವೃದ್ಧಿ ಪಡಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದರು. ಏಕಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನಕ್ಕೆ ಸಚಿವರು ಈ ಸಂದರ್ಭದಲ್ಲಿ ಚಾಲನೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ‌ ಬಗ್ಗೆ ವಿವರಿಸಿದರು.
ಹರಿಹರ ಕೊಲ್ಲಮೊಗ್ರು ಸಹಕಾರಿ ಕೃಷಿ ಪತ್ತಿನ ಬ್ಯಾಂಕ್ ಅಧ್ಯಕ್ಷ ಡಿ. ಎಸ್. ಹರ್ಷಕುಮಾರ ದೇವಜನ ಈ ಭಾಗದ ಸಮಸ್ಯೆಗಳ ಕುರಿತು ಸಚಿವರಿಗೆ ವಿವರಿಸಿದರು.
ಕೊಲ್ಲಮೊಗ್ರು ಗ್ರಾ.ಪಂ ಅಧ್ಯಕ್ಷೆ ಜಯಶ್ರೀ, ಉಪಾಧ್ಯಕ್ಷ ಅಶ್ವತ್ ಯಾಲದಾಳು, ಹರಿಹರ ಗ್ರಾ.ಪಂ ಉಪಾಧ್ಯಕ್ಷ ಜಯಂತ ಬಾಳುಗೋಡು, ಮಾಧವ ಚಾಂತಾಳ, ಉದಯ ಶಿವಾಲ,ಡಾ. ಸೋಮಶೇಖರ ಕಟ್ಟೆಮನೆ, ಡ್ಯಾನಿ ಯಾಲದಾಳು, ವಿನೂಪ ಮಲ್ಲಾರ, ಶೇಖರ ಅಂಬೆಕಲ್ಲು, ಬೆಳ್ಯಪ್ಪ ಖಂಡಿಗೆ, ಸತೀಶ್ ಟಿ.ಎನ್, ದಿನೇಶ್ ಮಡ್ತಿಲ, ಚಂದ್ರಶೇಖರ ಕೋನಡ್ಕ,ಮೋನಪ್ಪ ಕೊಳಗೆ, ಚೆನ್ನಕೇಶವ ಕೊಲ್ಲಮೊಗ್ರು, ಶಿವಾನಂದ ಕಲ್ಮಕಾರ್, ಪುಷ್ಪರಾಜ್ ಕೊಲ್ಲಮೊಗ್ರ ಕಾಂಗ್ರೆಸ್ ಮುಖಂಡರಾದ ಜಿ.ಕೃಷ್ಣಪ್ಪ, ಭರತ್ ಮುಂಡೋಡಿ, ರಕ್ಷಿತ್ ಶಿವರಾಂ, ಸುಧೀರ್ ಕುಮಾರ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ‌ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್, ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ,ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ‌‌ ಕಲ್ನಾರ್, ಮಹಾರಾಷ್ಟ್ರ ಕನ್ನಡಿಗರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ವಿಶ್ವನಾಥ ನಡುತೋಟ, ಪತ್ರಕರ್ತರಾದ ಬಾಲಕೃಷ್ಣ ಭೀಮಗುಳಿ, ಲೋಕೇಶ್ ಬಿ.ಎನ್, ಗಿರೀಶ್ ಅಡ್ಪಂಗಾಯ, ರತ್ನಾಕರ ಸುಬ್ರಹ್ಮಣ್ಯ, ಪ್ರಕಾಶ್ ಸುಬ್ರಹ್ಮಣ್ಯ ಶಿವರಾಮ ಕಜೆಮೂಲೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು