12:52 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಸಚಿವ ಖಂಡ್ರೆ ಸೂಚನೆ

03/02/2025, 09:28

ಬೆಂಗಳೂರು(reporterkarnataka.com): ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ.
ಅರಣ್ಯ ಹಕ್ಕು ಕಾಯಿದೆ ಅಡಿ ಇನ್ನೂ ಸಾವಿರಾರು ಅರ್ಜಿಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿರುವ ಸಚಿವರು, ಕಂದಾಯ ಭೂಮಿ (ಪಟ್ಟಾ ಜಮೀನು) ಮಾಲಿಕತ್ವ ಹೊಂದಿರುವವರೂ ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಿ ಕ್ರಮ ವಹಿಸಲು ಸೂಚಿಸಿದ್ದಾರೆ.
ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿರುವವರಿಂದ ತಮಗಾಗಲೀ, ತಮ್ಮ ಕುಟುಂಬದ ಸದಸ್ಯರಿಗಾಗಲೀ 2005ರ ಡಿಸೆಂಬರ್ 13ಕ್ಕೆ ಮೊದಲು ಅರಣ್ಯ ಮತ್ತು ಪಟ್ಟಾ ಜಮೀನು ಸೇರಿದಂತೆ 3 ಎಕರೆಗಿಂತ ಹಚ್ಚು ಜಮೀನು ಇರಲಿಲ್ಲ ಎಂಬ ಬಗ್ಗೆ ಸ್ವಯಂ ಘೋಷಣೆ (ಡಿಕ್ಲರೇಷನ್) ಬರೆಸಿಕೊಳ್ಳಲು ಮತ್ತು ‘ನಮೂನೆ-ಎ’ಯಲ್ಲಿರುವ ಅಂಶಗಳನ್ನು ಕಡ್ಡಾಯವಾಗಿ ಮತ್ತು ನಿಯಮಾನುಸಾರ ಪರಿಶೀಲಿಸಲು ಹಾಗೂ ತಪ್ಪು/ಸುಳ್ಳು ಮಾಹಿತಿ ಒದಗಿಸಿ ಕ್ಲೇಮ್ ಅರ್ಜಿ ಸಲ್ಲಿಸಿರುವವರನ್ನು ಅರಣ್ಯಹಕ್ಕು ಕಾಯಿದೆ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು