8:01 AM Saturday26 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಪೌರಕಾರ್ಮಿಕರ ಹಿತಾಸಕ್ತಿಗಳನ್ನು ಗಾಳಿಗೆ ತೂರಿದ ಪಾಲಿಕೆ: ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ನಾಗಣ್ಣ ಗೌಡ ಆಕ್ರೋಶ

09/03/2023, 11:41

ಮಂಗಳೂರು(reporterkarnataka.com): ಮಂಗಳೂರು ನಗರವನ್ನು ಸ್ವಚ್ಚ ಮಾಡುವ ಪೌರಕಾರ್ಮಿಕರ ಹಿತಾಸಕ್ತಿಗಳನ್ನು ಗಾಳಿಗೆ ತೂರಿರುವ ಪಾಲಿಕೆ ಕಾರ್ಮಿಕರನ್ನು ಮಧ್ಯಯುಗದ ಗುಲಾಮರಂತೆ ನಡೆಸಿಕೊಳ್ಳುತ್ತಿದೆ ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ ಪುರಸಭೆ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಕೂಳೂರಿನ ನಾರಾಯಣ ಗುರು ಸಭಾಂಗಣದಲ್ಲಿ ಹೊರಗುತ್ತಿಗೆ ನೌಕರರ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಪೌರಕಾರ್ಮಿಕರ ಕುರಿತ ಎಲ್ಲ ನಿಯಮಗಳನ್ನು ಪಾಲಿಕೆ ನಿರ್ಲಕ್ಷಿಸಿದೆ. ಬೆಳಗಿನ ಉಪಹಾರ, ಕನಿಷ್ಟ ವೇತನ, ಶೌಚಾಲಯ ಸೇರಿದಂತೆ ಕನಿಷ್ಟ ಅಗತ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ. ಪೌರಕಾರ್ಮಿಕರನ್ನು ಪ್ರಾಣಿಗಳಂತೆ ನಡೆಸಿಕೊಳ್ಳಲಾಗುತ್ತಿದೆ. ಹೊರಗುತ್ತಿಗೆ ನೌಕರರಿಗೆ ಯಾವುದೇ ಕೆಲಸದ ವೇಳೆಯೆ ನಿಗದಿಯಾಗಿಲ್ಲ. ಸಕಾಲಕ್ಕೆ ಸಂಬಳವೂ ಸಿಗುವುದಿಲ್ಲ ಎಂದು ಕಿಡಿಕಾರಿದರು.

ಸರಕಾರ ಕೂಡಲೆ ಎಲ್ಲ ಬಗೆಯ ಪೌರಕಾರ್ಮಿಕರನ್ನು ನೇರನೇಮಕಾತಿಗೊಳಿಸಬೇಕು ನಿಯಮಾನುಸಾರ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಜಿಲ್ಲಾಧಿಕಾರಿಗಳ ಆದೇಶವನ್ನೆ ಕಾಲಕಸ ಮಾಡಿಕೊಂಡಿರುವ ವಿಪರ್ಯಾಸ ಪಾಲಿಕೆಯಲ್ಲಿ ನಡೆದಿದೆ. ಜಿಲ್ಲಾಧಿಕಾರಿಗಳು ಈ ಸಂಬಂದ ಅಗತ್ಯಕ್ರಮ ವಹಿಸುವಂತೆ ಒತ್ತಾಯಿಸಿದರು.
ವೇದಿಕೆಯಲ್ಲಿ ಮಂಗಳೂರು ಸಫಾಯಿ ಕರ್ಮಚಾರಿ ಸಂಘದ ಜಿಲ್ಲಾಧ್ಯಕ್ಷರಾದ ನಾರಯಣ ಶೆಟ್ಟಿ ಕರಾವಳಿ ವಿಭಾಗದ ಸಂಚಾಲಕ ಅಣ್ಣಪ್ಪ ಕಾರೇಕಾಡು ಕೋಶಾಧಿಕಾರಿ ಕೃಷ್ಣ ಪೂಜಾರಿ, ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ, ವಿಭಾಗಾಧ್ಯಕ್ಷ ಚನ್ನಕೇಶವ ಹೊರಗುತ್ತಿಗೆ ಸಂಘದ ಸಿದ್ದರೂಡಾ, ಕರುನಾಡ ಸೇವಕರು ಸಂಘದ ಚಂದ್ರು ಎಂ.ಎನ್ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು