7:42 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಪಾವೂರು ಗ್ರಾಪಂ ಚುನಾವಣೆ: ಅದೃಷ್ಟ ಚೀಟಿ ಮೂಲಕ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ; ಉಪಾಧ್ಯಕ್ಷ ಎಸ್ ಡಿಪಿಐಗೆ

11/08/2023, 13:07

ಉಳ್ಳಾಲ(reporterkarnataka.com): ಪಾವೂರು ಗ್ರಾಮ ಪಂಚಾಯತ್’ನ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅದೃಷ್ಟ ಚೀಟಿ ಎತ್ರುವ ಮೂಲಕ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್ ಡಿಪಿಐಗೆ ಒಲಿದಿದೆ.
ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸಾತ್ಕೋ ಮಜೀದ್ ಮತ್ತು ಉಪಾಧ್ಯಕ್ಷರಾಗಿ ಎಸ್ ಡಿಪಿಐ ಬೆಂಬಲಿತೆ ಮೆಹರುನ್ನಿಸಾ ಆಯ್ಕೆಯಾಗಿದ್ದಾರೆ.ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ
ಟೈ ಆಗುವ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ಎದುರಾಗಿತ್ತು. ನಂತರ ಅದೃಷ್ಟ ಚೀಟಿ ಎತ್ತುವ ಮೂಲಕ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸಾತ್ಕೋ ಮಜೀದ್ ಮತ್ತು ಉಪಾಧ್ಯಕ್ಷರಾಗಿ ಎಸ್ ಡಿಪಿಐ ಬೆಂಬಲಿತೆ ಮೆಹರುನ್ನಿಸಾ ಆಯ್ಕೆಯಾಗಿದ್ದಾರೆ.
ಪಾವೂರು ಗ್ರಾಮ ಪಂಚಾಯಿತಿ ಒಟ್ಟು 15 ಸದಸ್ಯ ಬಲ ಹೊಂದಿದೆ. ಇದರಲ್ಲಿ ಎಸ್ ಡಿಪಿಐ 6, ಕಾಂಗ್ರೆಸ್ 5, ಬಿಜೆಪಿ 2 ಮತ್ತು 2 ಸ್ಥಾನವನ್ನು ಪಕ್ಷೇತರರು ಹೊಂದಿದ್ದಾರೆ.
ಕಳೆದ ಬಾರಿ ಪಕ್ಷೇತರರ ಬೆಂಬಲದೊಂದಿಗೆ ಎಸ್ ಡಿಪಿಐ ಅಧಿಕಾರ ನಡೆಸಿತ್ತು.
ಈ ಬಾರಿ ಎಸ್ ಡಿಪಿಐ ಬೆಂಬಲದಿಂದ ಪಕ್ಷೇತರ ಅಭ್ಯರ್ಥಿ ವಲೇರಿಯನ್ ಡಿಸೋಜ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೆಹರುನ್ನಿಸಾ, ಕಾಂಗ್ರೆಸ್ ನಿಂದ ಅಧ್ಯಕ್ಷ ಸ್ಥಾನಕ್ಕೆ ಸಾತ್ಕೋ ಮಜೀದ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ರವಿಕಲಾ ಸ್ಪರ್ಧಿಸಿದ್ದರು. ಚುನಾವಣೆ ನಡೆದಾಗ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳು ಏಳು ಮತಗಳನ್ನು ಪಡೆದಿದ್ದು ಒಂದು ಮತ ಅಸಿಂಧುಗೊಂಡಿತು. ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಗಳೂ 7 ಮತಗಳನ್ನು ಪಡೆದಿದ್ದರು. ಒಬ್ಬರು ಮತ ಚಲಾಯಿಸದ ಕಾರಣ ಸಮ ಬಲಗೊಂಡಿದ್ದು ಇದರಿಂದಾಗಿ ಅದೃಷ್ಟ ಚೀಟಿ ಎತ್ತಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು