4:17 PM Wednesday31 - December 2025
ಬ್ರೇಕಿಂಗ್ ನ್ಯೂಸ್
ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ

ಇತ್ತೀಚಿನ ಸುದ್ದಿ

ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಶಾಶ್ವತ ತಡೆಗೆ, ದ್ವೀಪವಾಸಿಗಳ ರಕ್ಷಣೆಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

05/07/2024, 15:48

ಮಂಗಳೂರು(reporterkarnataka.com): ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು, ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕು ಹಾಗೂ ವಾಸ್ತವ ಚಿತ್ರಣವನ್ನು ಮರೆಮಾಚಿ ಅಕ್ರಮ‌ ಮರಳುಗಾರಿಕೆಯಲ್ಲಿ ತೊಡಗಿರುವ ವ್ಯಕ್ತಿಗಳ ಜೊತೆಗೆ ಕೈಜೋಡಿಸಿ ಜಿಲ್ಲಾಡಳಿತಕ್ಕೆ ಸುಳ್ಳು ಮಾಹಿತಿ ನೀಡಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ ಹಾಗೂ ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ್(ರಿ) ಇವುಗಳ ಜಂಟಿ ಆಶ್ರಯದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಅರ್ಪಿಸಲಾಯಿತು.
ನಿಯೋಗದಲ್ಲಿ ಸಮಾನ ಮನಸ್ಕ ಸಂಘಟನೆ ಗಳ ಜಂಟಿ ವೇದಿಕೆಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ರೋಯ್ ಕ್ಯಾಸ್ಟಲಿನೋ, ಸುನಿಲ್ ಕುಮಾರ್ ಬಜಾಲ್, ಕೆಥೋಲಿಕ್ ಸಭಾದ ಅಧ್ಯಕ್ಷರಾದ ಆಲ್ವಿನ್ ಡಿಸೋಜ, ಇತರ ಪ್ರಮುಖರಾದ ಸ್ಟಾನಿ ಲೋಬೋ,ಜೋನ್ ಲಸ್ರದೋ ಹಾಗೂ ಪಾವೂರು ಉಳಿಯ ದ್ವೀಪವಾಸಿಗಳಾದ ಗಿಲ್ಬರ್ಟ್ ಡಿಸೋಜ, ರೊನಾಲ್ಡ್ ಡಿಸೋಜ, ಬೆನೆಡಿಕ್ಟ್ ಡಿಸೋಜ, ಬಜಿಲ್ ಡಿಸೋಜ, ಫಿಲಿಫ್ ಡಿಸೋಜ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು