3:32 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಪೌರ ಕಾರ್ಮಿಕರ ಅಗತ್ಯಕ್ಕೆ ಸಣ್ಣ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ

24/07/2021, 08:14

ಮಂಗಳೂರು(reporterkarnataka news):-ಜಿಲ್ಲೆಯ ಪೌರಕಾರ್ಮಿಕರು ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಊಟ-ಉಪಹಾರ ಸೇವನೆ ಸೇರಿದಂತೆ ಇತರೆ ಅಗತ್ಯಕ್ಕೆ ಸಣ್ಣ ಕೊಠಡಿಗಳನ್ನು ನಿರ್ಮಿಸಿ ಕೊಡಲು ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕಾರ್ಯಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ನಿರ್ದೇಶನ ನೀಡಿದರು.

ಅವರು ನಗರದ ಜಿಲ್ಲಾಧಿಕಾರಿಯವರ ನ್ಯಾಯಾಲಯದ ಸಭಾಂಗಣದಲ್ಲಿ ಜುಲೈ 23 ರ ಸಂಜೆ ಹಮ್ಮಿಕೊಳ್ಳಲಾಗಿದ್ದ ಸಫಾಯಿ ಕರ್ಮಚಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕರ್ತವ್ಯ ನಿರ್ವಹಣೆ ವೇಳೆಯಲ್ಲಿ ಪೌರ ಕಾರ್ಮಿಕರಿಗೆ ಊಟ-ಉಪಹಾರ ಸೇವನೆ, ಸಮವಸ್ತ್ರ ಧರಿಸುವುದು ಸೇರಿದಂತೆ ಇತರೆ ಅಗತ್ಯಗಳಿಗೆ ಅನುಗುಣವಾಗಿ ಅವರುಗಳು ಕೆಲಸ ಮಾಡುವ ವಾರ್ಡ್ ಗಳು ಅಥವಾ ಆಯಾ ವಾರ್ಡ್ ಗಳ ಆಸುಪಾಸಿನ ಸ್ಥಳಗಳಲ್ಲಿ ಸಣ್ಣ ಕೊಠಡಿಯನ್ನು ನಿರ್ಮಿಸಿ ಕೊಡಬೇಕು. ಅದಕ್ಕೆ ಸರ್ಕಾರಿ ಜಾಗ ಲಭ್ಯವಿದ್ದರೆ ಅಲ್ಲೇ ನಿರ್ಮಿಸಬೇಕು, ಇಲ್ಲದಿದ್ದರೇ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಸಂಚರಿಸಲು ಸಾಧ್ಯವಿಲ್ಲದೇ ಸ್ಥಗಿತಗೊಂಡಿರುವ ಕೆ.ಎಸ್.ಆರ್.ಟಿ.ಸಿ ಬಸ್‍ಗಳಲ್ಲಿ ಕೆಲವು ಮಾರ್ಪಾಡು ಮಾಡಿ ಅಥವಾ ಹಡಗುಗಳ ಕಂಪಾರ್ಟ್‍ಮೆಂಟ್‍ಗಳನ್ನು ಇದಕ್ಕೆ ಬಳಸಿಕೊಳ್ಳುವ ಸಾಧ್ಯತೆಗಳ ಕುರಿತು ಚಿಂತಿಸಬಹುದಾಗಿದೆ. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆ ಆಯುಕ್ತರು, ಪೌರಾಯುಕ್ತರು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು.

ಪೌರ ಕಾರ್ಮಿಕರಿಗೆ ಆದ್ಯತೆಯ ಮೇರೆಗೆ ಕೋವಿಡ್ ವ್ಯಾಕ್ಸಿನ್ ನೀಡಬೇಕು ಹಾಗೂ ಅವರ ಕುಟುಂಬದ ಸದಸ್ಯರಿಗೂ ಕೂಡ ಮುಖ್ಯವಾಗಿ ಅವರನ್ನು ನಿಯಮಿತವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು. ಜಿಲ್ಲೆಯಲ್ಲಿ ಯಾರೂ ಕೂಡ ಮ್ಯಾನ್‍ಹೋಲ್‍ಗಳಲ್ಲಿ ಇಳಿಯದಂತೆ ಎಚ್ಚರವಹಿಸಬೇಕು ಎಂದರು.

ಪೌರ ಕಾರ್ಮಿಕರ ನೇಮಕಕ್ಕೆ ಅನುಮತಿ ದೊರೆತಿದೆ, ಈ ಬಗ್ಗೆ ಕೂಡಲೇ ಅಧಿಸೂಚನೆ ಹೊರಡಿಸಲಾಗುವುದು. ಅವರ ನೇಮಕಾತಿಗಾಗಿ ಸಮಿತಿಯನ್ನು ರಚಿಸಲಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್ ಸಭೆಗೆ ಮಾಹಿತಿ ನೀಡಿದರು.

ಡಿಸಿಪಿ ಹರಿರಾಂ ಶಂಕರ್, ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕ ಯೋಗೇಶ್ ಎಸ್.ಬಿ, ಸಮಿತಿಯ ಸದಸ್ಯರು, ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು