1:22 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಭಾರೀ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಪೆಡ್ಲರ್ ಗಳ ಬಂಧನ; 46.50 ಲಕ್ಷ ಮೌಲ್ಯದ ಡ್ರಗ್ಸ್ ವಶ

20/04/2026, 22:59

ಮಂಗಳೂರು(reporterkarnataka.com): ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ ಬಂದ ಖಚಿತ ಮಾಹಿತಿಯಂತೆ ಬಜಾಜ್ ಫ್ರೀಡಂ ಬೈಕ್ ನಲ್ಲಿ MDMA ಅನ್ನು ಇಟ್ಟುಕೊಂಡು ಬರುತ್ತಿದ್ದ ಆರೋಪಿಗಳಾದ ಪಿಲಾರು ಹೊಸಗದ್ದೆ ಮನೆ ನಿವಾಸಿ ಪರ್ವೇಜ್ ಅಲಿಯಾಸ್ ದಾವೂದ್ ಪರ್ವೇಜ್ ಹಾಗೂ ಪಿಲಾರು ಪೆರ್ಮಾನ್ನೂರು ನಿವಾಸಿ ನಜರತ್ ಅಲಿ ಎಂಬವರನ್ನು ವಶಕ್ಕೆ ಪಡೆದು ಅವರು ಹೊಂದಿದ್ದ 46,50,000/-ಮೌಲ್ಯದ 465.8 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತುವನ್ನು ಕಂಕನಾಡಿ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿ ಫರ್ವೇಜ್ ಎಂಬಾತನು ಮಂಗಳೂರಿನ ಯುವ ಸಮುದಾಯ ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಜಿಲ್ಲೆಯ ಹೊರಗಿನಿಂದ ಬೃಹತ್ ಪ್ರಮಾಣದಲ್ಲಿ ಎಂಡಿಎಂಎ ತಂದು ಮಂಗಳೂರು ನಗರದಲ್ಲಿ ಮಾರಾಟ ಮತ್ತು ಸರಬರಾಜು ಮಾಡಲು ಪ್ರಯತ್ನಿಸುತ್ತಿರುವುದು ತನಿಖೆಯಲ್ಲಿ ತಿಳಿದು ಬಂದಿದೆ.
ಆರೋಪಿ ಫರ್ವೇಜ್ ಎಂಬಾತನ ವಿರುದ್ದ ಈಗಾಗಲೇ ಪಾಂಡೇಶ್ವರ, ವಾಮಂಜೂರು, ಬಂದರು ಪೊಲೀಸ್ ಠಾಣೆ, ಬೆಂಗಳೂರಿನ ಅಮೃತಹಳ್ಳಿ, ಮತ್ತು ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದ್ದು, ಈತನು ರೂಢಿಗತ ಡ್ರಗ್ ಪೆಡ್ಲರ್ ಆಗಿರುತ್ತಾನೆ. ಈತನ ಸ್ನೇಹಿತ ನಜರತ್ ಅಲಿ ಈತನೊಂದಿಗೆ ಡ್ರಗ್ ಪೆಡ್ಲಿಂಗ್ ವ್ಯವಹಾರಕ್ಕೆ ಸಹಕರಿಸುತ್ತಾ ಈ ಕೃತ್ಯದಲ್ಲಿ ತೊಡಗಿಸಿಕೊಂಡಿರುತ್ತಾನೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು