3:59 AM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಸೇನೆಯಲ್ಲಿ 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರಿಗೂ ಪಿಂಚಣಿ ಸೌಲಭ್ಯ

23/11/2025, 17:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸುಮಾರು15 ವರ್ಷಕ್ಕಿಂತ ಕಡಿಮೆ ಸೇನೆಯಲ್ಲಿ ಸೇವೆ ಸಲ್ಲಿಸಿ ಸೈನಿಕ ಪಿಂಚಣಿ ವಂಚಿತರಾದವರಿಗೂ ‘ಪಿಂಚಣಿ ಸೌಲಭ್ಯವಿದ್ದು, ಇದನ್ನು ಪಡೆದುಕೊಳ್ಳುವಂತೆ ಅಖಿಲ ಮಾಜಿ ಸೈನಿಕರ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಘಟಕದ ಗೌರವಾಧ್ಯಕ್ಷ ಕೊಟ್ಟುಕತ್ತಿರ ಸೋಮಣ್ಣ ತಿಳಿಸಿದ್ದಾರೆ.
ಇಂದಿಗೂ ಪಿಂಚಣಿ ಸೌಲಭ್ಯ ಇಲ್ಲದ ಹದಿನೈದು ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದ ಮಾಜಿ ಸೈನಿಕರು ಇಲ್ಲವೆ ವಿಧವೆಯರು ಈ ಸೌಲಭ್ಯವನ್ನು ಹೊಂದಿಕೊಳ್ಳಲು ಅವಕಾಶವಿದೆ. ಈ ಪಿಂಚಣಿ ಯೋಜನೆಯಡಿ 8 ಸಾವಿರ ರೂ. ಮಾಸಿಕ ಪಡೆಯಲು ಅವಕಾಶವಿದೆ,” ಎಂದು ತಿಳಿಸಿದರು. ”ಯೋಜನೆಯಡಿ ಸೌಲಭ್ಯ ಪಡೆಯಲು ಬಯಸುವವರ ಆದಾಯ ವಾರ್ಷಿಕ 80 ಸಾವಿರ ರೂ. ಒಳಗಿರಬೇಕು ಮತ್ತು 4 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರಬಾರದೆನ್ನುವ ನಿಯಮವಿದೆ. ಹದಿನೈದು ವರ್ಷ ಕ್ಕಿಂತ ಕಡಿಮೆ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಸೈನ್ಯದ ಪಿಂಚಣಿ ಯಿಂದ ವಂಚಿತರಾಗಿರುವವರು ಸೈನಿಕ ಬೋರ್ಡ್ ಮೂಲಕ ಪಿಂಚಣಿ ಸೌಲಭ್ಯ ಪಡೆಯಲು ಅವಕಾಶವಿದೆ. ಇದಕ್ಕಾಗಿ ಅಸಕ್ತರು ಡಿಸ್ಟಾರ್ಜ್ ಸರ್ಟಿಫಿಕೇಟ್, ಸೈನಿಕ ಬೋರ್ಡ್ ಐಡಿ ಕಾರ್ಡ್, ಆಧಾರ್, ಪ್ಯಾನ್, ಅದಾಯ ದೃಢೀಕರಣ ಪತ್ರ ದಾಖಲಾತಿಗಳೊಂದಿಗೆ ಸೈನಿಕ ಬೋರ್ಡ್ ಸಂಪರ್ಕಿಸಬಹುದು. ಮಾಹಿತಿಗಾಗಿ ತನ್ನ ಮೊ. 9448447158 ಅನ್ನು ಸಂಪರ್ಕಿಸಬಹುದು,” ಎಂದು ತಿಳಿಸಿದರು. ಮಾಹಿತಿಯ ಕೊರತೆ: ಈ ಪಿಂಚಣಿ ಹಿಂದಿನಿಂದಲೂ ಜಾರಿಯಲ್ಲಿದ್ದರು ಬಹಳಷ್ಟು ಮಾಜಿ ಸೈನಿಕರಿಗೆ ಇದರ ಕುರಿತಾದ ಮಾಹಿತಿ ಇಲ್ಲದೆ, ಪಿಂಚಣಿಯಿಂದ ವಂಚಿತರಾಗಿದ್ದಾರೆ. ಇನ್ನಾದರು ಇದರ ಸೌಲಭ್ಯ ಹೊಂದಿಕೊಳ್ಳಬೇಕು,” ಎಂದು ಮನವಿ ಮಾಡಿದರು. ಕಡುಬಡವರಿಗೆ ನೆರವು: ಸೈನಿಕ ಪಿಂಚಣಿ ಸೌಲಭ್ಯವನ್ನು ಪಡೆಯುತ್ತಿರುವ ಕಡುಬಡವರಾದ ಮಾಜಿ ಸೈನಿಕರ ಮಕ್ಕಳು ವೈದ್ಯಕೀಯ, ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಲ್ಲಿ, ಅವರಿಗೆ ಗದಗ್‌ನ ದೇವಪ್ರಭು ಎಂಬುವವರು ಧನ ಸಹಾಯ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಧನ ಸಹಾಯ ಬಯಸುವ ಕಡುಬಡವರಾದ ಮಾಜಿ ಸೈನಿಕರು ಮೊ. 8660737534 ಅನ್ನು ಸಂಪರ್ಕಿಸಬಹುದು,” ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು