12:14 PM Wednesday11 - March 2026
ಬ್ರೇಕಿಂಗ್ ನ್ಯೂಸ್
ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

11/03/2026, 12:14

ನವದೆಹಲಿ(reporterkarnataka.com): ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ಕರ್ನಾಟಕದ ಇತರ ಭಾಗಗಳಲ್ಲಿ ‘ಕಂಬಳ’ ಆಯೋಜಿಸುವುದನ್ನು ವಿರೋಧಿಸಿ ಪ್ರಾಣಿದಯಾ ಸಂಘಟನೆ ‘ಪೆಟಾ’ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಈ ಮೂಲಕ ರಾಜ್ಯದೆಲ್ಲೆಡೆ ತುಳುನಾಡಿನ ಜಾನಪದ ಕ್ರೀಡೆ ಕಂಬಳವನ್ನು ನಡೆಸಲು ಹಾದಿ ಸುಗಮವಾಗಿದೆ.
ಕರ್ನಾಟಕ ಹೈಕೋರ್ಟ್ ನವೆಂಬರ್ 14ರಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಪೆಟಾ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ನಡೆಸಿತು. ವಿಚಾರಣೆ ವೇಳೆ ಪೀಠವು, “ಕಂಬಳ ಕ್ರೀಡೆಯನ್ನು ರಾಜ್ಯದ ಒಂದು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಏಕೆ ಸೀಮಿತಗೊಳಿಸಬೇಕು? ಸಮಿತಿಯವರು ರಾಜ್ಯದ ವಿವಿಧ ಭಾಗಗಳಲ್ಲಿ ತಮ್ಮ ಸಂಸ್ಕೃತಿಯನ್ನು ಪ್ರದರ್ಶಿಸಲು ಬಯಸಿದರೆ ಅದರಲ್ಲಿ ತಪ್ಪೇನಿದೆ? ರಾಜ್ಯದ ಇತರ ಭಾಗಗಳ ಜನರೂ ಈ ವಿಶಿಷ್ಟ ಸಂಸ್ಕೃತಿಯ ಪರಿಚಯವನ್ನು ಹೊಂದಲಿ” ಎಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿತು.

*ಪೆಟಾ ವಾದವೇನಿತ್ತು:?*
ಸುಪ್ರೀಂ ಕೋರ್ಟ್ ನಿಲುವಿಗೆ ಆಕ್ಷೇಪ ವ್ಯಕ್ತಪಡಿಸಿದ ಪೆಟಾ ಪರ ವಕೀಲರು, “ನಿರ್ದಿಷ್ಟ ಪ್ರದೇಶವನ್ನು ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿ ಕಂಬಳ ಆಯೋಜಿಸುವುದು ಒಪ್ಪುವಂತಹುದಲ್ಲ. ಸುಪ್ರೀಂ ಕೋರ್ಟ್ ಮುಂದೆ ರಾಜ್ಯ ಸರ್ಕಾರ ಈ ಹಿಂದೆ ಸಲ್ಲಿಸಿರುವ ಪ್ರಮಾಣ ಪತ್ರದ ಅನುಸಾರ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಾತ್ರವೇ ಕಂಬಳವನ್ನು ಆಯೋಜಿಸಬೇಕಿದೆ” ಎಂದು ವಾದಿಸಿದರು.

*ಬೆಂಗಳೂರು ಕಂಬಳಕ್ಕೆ ವಿರೋಧವೇಕೆ?:*
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಸ್ಪರ್ಧೆ ನಡೆಸಲು ಬೆಂಗಳೂರು ಕಂಬಳ ಸಮಿತಿಗೆ ಅನುಮತಿ ನೀಡಬಾರದು ಎಂದು ಕೋರಿ ಪೆಟಾ ಸಂಸ್ಥೆಯು ಈ ಹಿಂದೆ ಹೈಕೋರ್ಟ್ ಮೆಟ್ಟಿಲೇರಿತ್ತು. ಅಲ್ಲಿ ಹಿನ್ನಡೆಯಾದ ಬಳಿಕ ಸುಪ್ರೀಂ ಕೋರ್ಟ್ ಕದ ತಟ್ಟಿತ್ತು.
“ಕರಾವಳಿಯಿಂದ ಸುಮಾರು 300 ಕಿ.ಮೀ ದೂರದಿಂದ ದಣಿದ ಕೋಣಗಳನ್ನು ಟ್ರಕ್‌ಗಳಲ್ಲಿ ತಂದು ಸ್ಪರ್ಧೆಗೆ ಇಳಿಸಲಾಗುತ್ತದೆ. ಇದು ಸ್ಪಷ್ಟವಾಗಿ ಪ್ರಾಣಿ ಹಿಂಸೆಯಾಗುತ್ತದೆ. ಅರಮನೆ ಮೈದಾನದಲ್ಲಿ ನಡೆಯುವ ಕಂಬಳಕ್ಕೆ ಲಕ್ಷಾಂತರ ಜನ ಬರುತ್ತಾರೆ, ವಿಐಪಿ ಪಾಸ್‌ಗಳನ್ನು ವಿತರಿಸಲಾಗುತ್ತಿದೆ ಹಾಗೂ ದೊಡ್ಡ ದೊಡ್ಡ ಉದ್ಯಮಿಗಳು ಇದರ ಪ್ರಾಯೋಜಕತ್ವ ವಹಿಸಿಕೊಂಡಿದ್ದಾರೆ. ಇದಲ್ಲದೆ, ಶಿವಮೊಗ್ಗದಲ್ಲೂ ಈ ಕ್ರೀಡೆ ನಡೆಸುವ ಚಿಂತನೆಯನ್ನು ಕಂಬಳ ಆಯೋಜನಾ ಸಮಿತಿ ಹೊಂದಿದೆ. ಹೀಗಾಗಿ ಬೇರೆ ಜಿಲ್ಲೆಗಳಲ್ಲಿ ಕಂಬಳ ಆಯೋಜನೆಗೆ ತಡೆ ನೀಡಬೇಕು” ಎಂದು ಪೆಟಾ ತನ್ನ ಅರ್ಜಿಯಲ್ಲಿ ದೂರಲಾಗಿತ್ತು. ಆದರೆ, ನ್ಯಾಯಾಲಯವು ಪೆಟಾದ ಈ ಎಲ್ಲ ವಾದಗಳನ್ನು ತಳ್ಳಿಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು