6:25 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಫಿಸಿಯೋಥೆರಪಿ ಜತೆಗೆ ಯೋಗ, ವ್ಯಾಯಾಮಕ್ಕೂ ಆದ್ಯತೆ ನೀಡಿ: ಮಂಗಳೂರಿನಲ್ಲಿ ರಾಜ್ಯಪಾಲ ಗೆಹ್ಲೋಟ್ ಕರೆ

08/09/2023, 19:15

ಮಂಗಳೂರು(reporterkarnataka.com): ಯೋಗ ಮತ್ತು ವ್ಯಾಯಾಮವು ದೈಹಿಕ ಚಿಕಿತ್ಸೆಗೆ ನಿಕಟ ಸಂಬಂಧ ಹೊಂದಿದೆ. ಫಿಸಿಯೋಥೆರಪಿ, ಯೋಗ ಮತ್ತು ವ್ಯಾಯಾಮದ ಜೊತೆಗೆ ದೇಹದ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಬಳಸಬಹುದು. ಅದಕ್ಕಾಗಿಯೇ ಫಿಸಿಯೋಥೆರಪಿ ಜತೆಗೆ ಯೋಗಕ್ಕೂ ಆದ್ಯತೆ ನೀಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಸೌತ್ ಕೆನರಾ ಫಿಸಿಯೋಥೆರಪಿ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಮಂಗಳೂರು ಫಿಸಿಯೋಕಾನ್ 2023 ಅಂತಾರಾಷ್ಟ್ರೀಯ ಫಿಸಿಯೋಥೆರಪಿ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಇಂದು ವಿಶ್ವ ಫಿಸಿಯೋಥೆರಪಿ ದಿನವಾಗಿದ್ದು, ಇದರ ಅಂಗವಾಗಿ ಆಯೋಜಿಸಲಾಗಿರುವ ಈ ಸಮ್ಮೇಳನದಲ್ಲಿ “ಭೌತಚಿಕಿತ್ಸೆ(ಫಿಸಿಯೋಥೆರಪಿ)ಯ ಸಂಭಾವ್ಯತೆಯನ್ನು ಅನ್ಲಾಕ್ ಮಾಡಲು ಸಂಪರ್ಕಿಸಿ” ಎಂಬ ವಿಷಯದ ಕುರಿತು ಚರ್ಚಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಕೆಲವು ರೀತಿಯ ಅಂಗವೈಕಲ್ಯದಿಂದ ಬಳಲುತ್ತಿರುವ ಜನರಿಗೆ ಸೇವೆ ಸಲ್ಲಿಸಲು ಮತ್ತು ದೈಹಿಕವಾಗಿ ಸಬಲೀಕರಣಗೊಳಿಸಲು ಆರಿಸಿಕೊಂಡಿರುವ ಮಾರ್ಗ ಮತ್ತು ಸಮಾಜವನ್ನು ಆರೋಗ್ಯಕರವಾಗಿ ಮತ್ತು ಸದೃಢವಾಗಿಡಲು ಸಹಕಾರಿಯಾಗಲಿದೆ ಎಂದು ಶ್ಲಾಘಿಸಿದರು.
ಭೌತಚಿಕಿತ್ಸೆಯು ಕೆಲವು ರೀತಿಯ ಗಾಯ, ಅನಾರೋಗ್ಯ ಅಥವಾ ಅಂಗವೈಕಲ್ಯದಿಂದ ಪ್ರಭಾವಿತವಾಗಿರುವ ವ್ಯಕ್ತಿಗಳಲ್ಲಿ ಚಲನಶೀಲತೆ, ದೈಹಿಕ ಶಕ್ತಿ ಮತ್ತು ಕಾರ್ಯಚಟುವಟಿಕೆಯನ್ನು ಮರುಸ್ಥಾಪಿಸುವಲ್ಲಿ ಪರಿಣತಿ ಹೊಂದಿರುವ ಚಿಕಿತ್ಸೆಯ ಹಳೆಯ ರೂಪವಾಗಿದೆ. ಭೌತಚಿಕಿತ್ಸೆ ದೈಹಿಕ ಗಾಯಕ್ಕೆ ಚಿಕಿತ್ಸೆ ನೀಡುವುದಲ್ಲದೆ, ಮಾನಸಿಕ ಸವಾಲನ್ನು ಎದುರಿಸಲು ರೋಗಿಗೆ ಧೈರ್ಯವನ್ನು ನೀಡುತ್ತದೆ ಎಂದು ಹೇಳಿದರು. ಪ್ರಸ್ತುತವಾಗಿ ಭೌತಚಿಕಿತ್ಸೆಯ ಜನಪ್ರಿಯತೆ ಮತ್ತು ಸ್ವೀಕಾರವು ಹೆಚ್ಚಿದೆ. ಫಿಟ್‍ನೆಸ್ ಅನ್ನು ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡುವ ಉದ್ದೇಶದಿಂದ ಪ್ರಧಾನ ಮಂತ್ರಿಗಳು ಫಿಟ್ ಇಂಡಿಯಾ ಆಂದೋಲನವನ್ನು ಪ್ರಾರಂಭಿಸಿದ್ದಾರೆ. ಇಂದಿನ ಕಾಲದಲ್ಲಿ ಪ್ಯಾರಾ ಮೆಡಿಕಲ್ ಕ್ಷೇತ್ರ ಸಾಕಷ್ಟು ಬೆಳೆಯುತ್ತಿದೆ. ಫಿಸಿಯೋಥೆರಪಿಯಲ್ಲಿ ವೃತ್ತಿಜೀವನದ ನಿರೀಕ್ಷೆಗಳು ಹೆಚ್ಚಾಗಲು ಇದು ಕಾರಣವಾಗಿದೆ ಎಂದು ತಿಳಿಸಿದರು.
ಮೂಳೆ ಚಿಕಿತ್ಸಾಲಯಗಳು, ಆಸ್ಪತ್ರೆಗಳು, ಪುನರ್ವಸತಿ ಕೇಂದ್ರಗಳು, ಫಿಟ್ನೆಸ್ ಕೇಂದ್ರಗಳು, ಕ್ರೀಡಾ ಸೌಲಭ್ಯಗಳು ಮತ್ತು ರಕ್ಷಣಾ ಸಂಸ್ಥೆಗಳಲ್ಲಿ ಅರ್ಹ ಭೌತಚಿಕಿತ್ಸಕರ ಬೇಡಿಕೆಯು ನಿರಂತರವಾಗಿ ಹೆಚ್ಚುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ ಖಾದರ್, ಸಚಿವರಾದ ಡಾ ಶರಣ ಪ್ರಕಾಶ್ ಪಾಟೀಲ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು