8:22 AM Tuesday9 - September 2025
ಬ್ರೇಕಿಂಗ್ ನ್ಯೂಸ್
ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5…

ಇತ್ತೀಚಿನ ಸುದ್ದಿ

ಪಿಲಿಕುಳದಲ್ಲಿ ಎಲ್ಲರ ಸಹಭಾಗಿತ್ವದಲ್ಲಿ ತುಳುನಾಡ ಉತ್ಸವ, ಕಂಬಳ: ಸ್ಪೀಕರ್ ಖಾದರ್

12/09/2024, 21:23

ಬೆಂಗಳೂರು(reporterkarnataka.com): ಪಿಲಿಕುಳ ನಿಸರ್ಗ ಧಾಮಕ್ಕೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಕಂಬಳ ತುಳುನಾಡ ಉತ್ಸವವನ್ನು ಎಲ್ಲರ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲು ಸ್ಪೀಕರ್ ಯು.ಟಿ.ಖಾದರ್ ಸಲಹೆ ನೀಡಿದ್ದಾರೆ.
ಅವರು ಗುರುವಾರ ವಿಧಾನ ಸಭಾ ಕಚೇರಿಯ ಸಭಾಂಗಣದಲ್ಲಿ ಪಿಲಿಕುಳ ಕಂಬಳ, ತುಳುನಾಡ ಉತ್ಸವದ ಬಗ್ಗೆ ಜನಪ್ರತಿನಿಧಿಗಳು ಅಧಿಕಾರಿಗಳ ಸಭೆಯನ್ನು ದ್ದೇಶಿಸಿ ಮಾತನಾಡಿದರು.
ಪಿಲಿಕುಳದಲ್ಲಿ ಕೆಲವೊಂದು ಶಾಶ್ವತವಾದ ಕಾಮಗಾರಿಗಳನ್ನು ಕೈಗೊಂಡು ಅಭಿವೃದ್ಧಿಪಡಿಸಲು ಸಂಘಟಿತ ಪ್ರಯತ್ನ ನಡೆಸಲು ತುಳು ನಾಡು ಉತ್ಸವದ ಮೂಲಕ ತುಳುನಾಡಿನ ಕಂಬಳ ಸೇರಿದಂತೆ ಕಲೆ, ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ, ಕೃಷಿಮೇಳ, ಆಹಾರ ಮೇಳಗಳ ಮೂಲಕ ಚಾಲನೆ ನೀಡುವ ಚಿಂತನೆ ಇದೆ. ಈ ಬಗ್ಗೆ ಸಂಸದರು, ಶಾಸಕರು ಅಧಿಕಾರಿಗಳು, ಜನಪ್ರತಿನಿಧಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಮಾಲೋಚನೆ ಸಲಹೆ ಸೂಚನೆಗಳನ್ನು ಪಡೆದು ಕಾರ್ಯಕ್ರಮ ರೂಪಿಸಲಾಗುವುದು. ಇದಕ್ಕೆ ಪೂರಕವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಿ ಕಾರ್ಯ ಯೋಜನೆ ರೂಪಿಸಲು ಯು.ಟಿ.ಖಾದರ್ ಸಲಹೆ ನೀಡಿದರು‌.
ಇದರಿಂದ ಪಿಲಿಕುಳಕ್ಕೆ ಸಾಕಷ್ಟು ಮಂದಿ ಪ್ರವಾಸಿಗರು, ವಿದ್ಯಾರ್ಥಿಗಳು ಭೇಟಿ ನೀಡಿ ನಿಸರ್ಗ ಧಾಮದ ಪ್ರಯೋಜನ ಪಡೆದುಕೊಳ್ಳಲು ಸಾಧ್ಯ ಎಂದು ಖಾದರ್ ವಿವರಿಸಿದರು.
ತುಳುನಾಡು ಉತ್ಸವವನ್ನು ಈ ಬಾರಿ ಯಶಸ್ವಿಯಾಗಿ ಆಚರಿಸಿ ಮುಂದಿನ ಹಂತದಲ್ಲಿ ರಾಜ್ಯದ ಬಜೆಟ್ ನಲ್ಲಿ ಈ ಉತ್ಸವಕ್ಕೆ ಅನುದಾನ ನಿಗದಿಪಡಿಸಿ ಶಾಶ್ವತವಾಗಿ ಕಾರ್ಯಕ್ರಮ ನಡೆಸಬಹುದು
ಎಂದು ಖಾದರ್ ತಿಳಿಸಿದರು.
ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಪಿಲಿಕುಳದ ಅಭಿವೃದ್ಧಿ ಹಾಗೂ ಜಿಲ್ಲೆಯ ಅಭಿವೃದ್ಧಿಯ
ನಿಟ್ಟಿನಲ್ಲಿ ಒಳ್ಳೆಯ ಉದ್ದೇಶದಿಂದ ಈ ಉತ್ಸವ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಸದರು, ಶಾಸಕರು ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಸಮಾಲೋಚನಾ ಸಭೆ ಕರೆಯುವುದಾಗಿ ತಿಳಿಸಿದ್ದಾರೆ.
ಸಂಸದ ಬೃಜೇಶ್ ಚೌಟ ಮಾತನಾಡಿ, ಈ ಉತ್ಸವದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಪ್ರಯೋಜನ ಪಡೆದುಕೊಳ್ಳು ವಂತಾಗಬೇಕು ಎಂದರು.


ಈ ಸಂದರ್ಭದಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್ ರಾಜೇಶ್ ನಾಯ್ಕ್, ಡಾ.ಭರತ್ ಶೆಟ್ಟಿ, ಹರೀಶ್ ಪೂಂಜ, ಅಶೋಕ್ ಕುಮಾರ್ ರೈ, ಡಾ.ಮಂಜುನಾಥ ಭಂಡಾರಿ, ಐವನ್ ಡಿ ಸೋಜ , ಭೋಜೇ ಗೌಡ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ದಕ್ಷಿಣ ಕನ್ನಡ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ , ಆಳ್ವಾಸ್ ಶಿಕ್ಷಣ ಸಂಸ್ಥೆ ಗಳ ಅಧ್ಯಕ್ಷ ಡಾ.ಮೋಹನ್ ಆಳ್ವ, ಪಿಲಿಕುಳ ಅಭಿವೃದ್ಧಿ ಪ್ರತಿಷ್ಠಾನದ ಅಧಿಕಾರಿಗಳು, ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು