8:19 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ತಡೆ ಕೋರಿ ಸಲ್ಲಿಸಿದ ಪಿಐಎಲ್ ಅರ್ಜಿ ಹೈಕೋರ್ಟ್ ನಿಂದ ವಜಾ; ಪ್ರತಾಪ್ ಸಿಂಹಗೆ ಮುಖಭಂಗ

15/09/2025, 16:57

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com
ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಹೈಕೋರ್ಟ್ ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (PIL) ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿದೆ.

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಬಾರದು ಎಂದು ಪ್ರತಾಪ್ ಸಿಂಹ, ಟಿ. ಗಿರೀಶ್ ಕುಮಾರ್ ಹಾಗೂ ಹೆಚ್. ಎಸ್. ಗೌರವ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಾಧೀಶರಾದ ಸಿ. ಎಂ. ಜೋಶಿ ಅವರಿದ್ದ ನ್ಯಾಯಪೀಠ, ಅರ್ಜಿಗಳನ್ನು ವಜಾಗೊಳಿಸಿ ಆದೇಶ ಪ್ರಕಟಿಸಿತು. ವಿಭಿನ್ನ ನಂಬಿಕೆಯ ವ್ಯಕ್ತಿಯನ್ನು ದಸರಾ ಉದ್ಘಾಟನೆ ಆಹ್ವಾನಿಸಿರುವುದರಿಂದ ಸಾಂವಿಧಾನಿಕ ಅಥವಾ ಕಾನೂನು ಹಕ್ಕನ್ನು ಉಲ್ಲಂಘಿಸುತ್ತದೆ ಎಂಬ ವಾದಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿತು. ಇದರಿಂದ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರ ಹೆಸರು ಆಯ್ಕೆಯಾದಾಗಿನಿಂದಲೂ ವಿರೋಧ ವ್ಯಕ್ತಪಡಿಸುತ್ತಾ ಬಂದಿರುವ ಪ್ರತಾಪ್ ಸಿಂಹ ಅವರಿಗೆ ತೀವ್ರ ಹಿನ್ನಡೆಯದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು