11:34 AM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ಇಂದು ಗ್ರಹಗಳ ವೀಕ್ಷಣೆ; ಮಂಗಳ, ಗುರು, ಶನಿ ಮತ್ತು ಶುಕ್ರ ದರ್ಶನ

05/01/2023, 18:01

ಮಂಗಳೂರು(reporterkarnataka.com): ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜ.5ರ ಗುರುವಾರ ಸಂಜೆ 6.30ರ ಸುಮಾರಿಗೆ ರಾತ್ರಿ ಆಕಾಶ ವೀಕ್ಷಣೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ವೇಳೆ ಕಾಣಲಿರುವ ಮಂಗಳ, ಗುರು, ಶನಿ ಮತ್ತು ಶುಕ್ರ ಗ್ರಹಗಳನ್ನು ವೀಕ್ಷಿಸಬಹುದು. ವಿಜ್ಞಾನ ಕೇಂದ್ರದ ಆವರಣದಲ್ಲಿ ಇವುಗಳನ್ನು ದೂರದರ್ಶಕದ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ನಕ್ಷತ್ರ, ಗ್ರಹ ಮತ್ತು ನಕ್ಷತ್ರಪುಂಜಗಳನ್ನು ಗುರುತಿಸುವುದನ್ನು ಪರಿಚಯಿಸಲಾಗುವುದು. ಬರಿಗಣ್ಣಿನಿಂದ ಇವುಗಳನ್ನು ನೋಡಬಹುದಾದರೂ ದೂರದರ್ಶಕದಿಂದ ನೋಡುವುದು ಬೇರೆಯೇ ಅನುಭವ ನೀಡುತ್ತದೆ ಜೊತೆಗೆ ಚಂದ್ರನನ್ನು ಕಣ್ತುಂಬಿಕೊಳ್ಳಬಹುದು ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು