ಇತ್ತೀಚಿನ ಸುದ್ದಿ
ಕಣ್ಣೂರಿನಲ್ಲಿ ಪೈಪ್ ಲೈನ್ ದುರಸ್ತಿ ಕಾರ್ಯ ಪೂರ್ಣ: ನಾಳೆಯಿಂದ ಮಂಗಳೂರಿಗೆ ನೀರು ಸರಬರಾಜು ಯಥಾಸ್ಥಿತಿಗೆ
19/11/2025, 23:07
ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ (80 MLD) ರೇಚಕ ಸ್ಥಾವರದಿಂದ ನಗರಕ್ಕೆ ನೀರು ಪೂರೈಸುವ 1100 ಮಿ.ಮೀ. ವ್ಯಾಸದ ಮುಖ್ಯ ಕೊಳವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ನಾಳೆಯಿಂದ(ನ.20) ನೀರು ಸರಬರಾಜು ಯಥಾಸ್ಥಿತಿಗೆ ಮರಳಲಿದೆ.
ನ.17ರಂದು ಬೆಳಗಿನ ಸಮಯದಲ್ಲಿ ಪಡೀಲ್ ಸಮೀಪದ ಕಣ್ಣೂರು ಬಳಿ ನೀರಿನ ಪೈಪ್ ಹಾನಿಗೊಳಗಾಗಿತ್ತು. ಈ ಹಿನ್ನೆಲೆ ತುರ್ತು ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಬುಧವಾರ ( ನ.19) ದುರಸ್ತಿ ಕಾರ್ಯ ಪೂರ್ಣಗೊಳಿಸಿದ್ದು ಗುರುವಾರ ಬೆಳಿಗ್ಗೆ ವೇಳೆಗೆ ನೀರು ಸರಬರಾಜು ಯಥಾಸ್ಥಿತಿಗೆ ಮರಳಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಮೂಲಗಳು ತಿಳಿಸಿವೆ.












