7:55 PM Wednesday27 - November 2024
ಬ್ರೇಕಿಂಗ್ ನ್ಯೂಸ್
ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​

ಇತ್ತೀಚಿನ ಸುದ್ದಿ

ಪಿರಿಯಾಪಟ್ಟಣ: ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಇಳಿದ ಪೌರ ಕಾರ್ಮಿಕರು: ಓರ್ವ ಮೃತ್ಯು, ಇಬ್ಬರು ಅಸ್ವಸ್ಥ

21/12/2021, 11:03

ಮೈಸೂರು( reporterkarnataka.com): ಪಿರಿಯಾಪಟ್ಟಣ ಪುರಸಭೆ ವ್ಯಾಪ್ತಿಯಲ್ಲಿ 

ಮೂವರು ವ್ಯಕ್ತಿಗಳನ್ನು ಮ್ಯಾನ್ ಹೋಲ್ ನಲ್ಲಿ ಸ್ವಚ್ಛತೆ ಗಿಳಿಸಲಾಗಿದ್ದು, ಇವರಲ್ಲಿ ಓರ್ವ ಮೃತಪಟ್ಟಿದ್ದು, ಇತರ ಇಬ್ಬರು ಅಸ್ವಸ್ಥಗೊಂಡಿದ್ದಾರೆ.

ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ವೇಳೆ ಮೂವರು ಅಸ್ವಸ್ಥಗೊಂಡಿದ್ದರು.

ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಮೈಸೂರಿಗೆ ದಾಖಲಿಸಲಾಗಿತ್ತು. ಆದರೆ ಅದರಲ್ಲಿ ಮಧು ಎಂಬ ವ್ಯಕ್ತಿ ಮೃತಪಟ್ಟಿದ್ದು, ಜಿಲ್ಲಾಧಿಕಾರಿಗಳ ಕಛೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿಗಳ ಕಛೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ನಾರಾಯಣ ಮಾತನಾಡಿ, ಪಿರಿಯಾಪಟ್ಟಣದಲ್ಲಿ ಆದಿದ್ರಾವಿಡ ಸಮಾಜದ ಮಧು ಅವರನ್ನು ಬಲವಂತವಾಗಿ ಇಳಿಸಿ ಒಳಚರಂಡಿ ಗುಂಡಿ ಸ್ವಚ್ಛ ಗೊಳಿಸಿದ್ದು ಮಧು ಅವರು ಅಸ್ವಸ್ಥರಾಗಿ ಸಾವನ್ನಪ್ಪಿದ್ದಾರೆ. ಮ್ಯಾನ್ ಹೋಲ್ ಗೆ ಕಾರ್ಮಿಕರನ್ನು ಇಳಿಸಬಾರದೆಂದು ನಿಯಮವಿದ್ದರೂ ಬಲವಂತದಿಂದ ಇಳಿಸಲಾಗಿದೆ. ಅವರು ಅಸ್ವಸ್ಥರಾಗಿ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬದಲ್ಲಿ ಓರ್ವರಿಗೆ ಇದೀಗ ಸರ್ಕಾರಿ ನೌಕರಿ ನೀಡಬೇಕು. ಮ್ಯಾನ್ ಹೋಲ್ ಗೆ ಬಲವಂತವಾಗಿ ಇಳಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಮೃತರ ಕುಟುಂಬಕ್ಕೆ ಪರಿಹಾರವನ್ನು ತಕ್ಷಣ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರು ಮಾತನಾಡಿ ಮೃತದೇಹವನ್ನಿಟ್ಟು ಪ್ರತಿಭಟನೆ ನಡೆಸುವುದು ನಮ್ಮ ತಪ್ಪು. ನಾಗರೀಕ ಸಮಾಜ ತಲೆತಗ್ಗಿಸುವ ವಿಚಾರ. ನಮಗೂ ಗೊತ್ತು. ನಮಗೆ ಧ್ವನಿ ಇಲ್ಲ, ನಮ್ಮ ದುಃಖ ದುಮ್ಮಾನಗಳನ್ನು ಯಾವ ರೀತಿ ಹೇಳಿಕೊಳ್ಳೋದು, ನಮ್ಮ ಆಕ್ರೋಶ ವ್ಯಕ್ತಪಡಿಸಲು ಇಲ್ಲಿ ತಂದಿದ್ದೇವೆ. ತಾವು ಅನ್ಯಥಾ ಭಾವಿಸದೇ ಇಲ್ಲಿ ಘೋಷಣೆಯನ್ನು ಮಾಡಬೇಕು. ಸ್ಥಳದಲ್ಲಿ ಚೆಕ್ ನೀಡದ ಹೊರತು ನಾವು ಮೃತದೇಹವನ್ನು ತೆಗೆಯಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನೀವು ತೆಗೆದುಕೊಳ್ಳುವ ಕ್ರಮದಿಂದ ಈ ರೀತಿ ಘಟನೆಗಳು ಮರುಕಳಿಸದಂತೆ ಈ ರಾಜ್ಯಕ್ಕೆ, ಈ ಜಿಲ್ಲೆಗೆ ಒಂದು ಸಂದೇಶವನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಲ್ಲಿ ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ  ಡಿ.ಆರ್.ರಾಜು, ರಾಜ್ಯ ಕಾರ್ಯಾಧ್ಯಕ್ಷ ಮಂಚಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಮಾರ್, ರಮೇರ್ಶ, ಕುಮಾರ್ ಸೇರಿದಂತೆ ಹಲವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು