9:50 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ

10/05/2026, 17:53

ಬೆಂಗಳೂರು(reporterkarnataka.com): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (65) ಇದೀಗ ನಿಧನರಾಗಿದ್ದಾರೆ. ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಸಚಿವ ಡಿ. ಸುಧಾಕರ್ ನಿಧನರಾಗಿದ್ದಾರೆ. ಚಿತ್ರದುರ್ಗದ ಉಸ್ತುವಾರಿ ಸಚಿವರಾಗಿರುವ ಸುಧಾಕರ್ ಇಂದು ಬೆಳಿಗ್ಗೆ 3. 15 ಕ್ಕೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಡಿ ಸುಧಾಕರ್ ಚಿಕಿತ್ಸೆ ಪಡೆಯುತ್ತಿದ್ದರು ಆರೋಗ್ಯದಲ್ಲಿ ಚೇತರಿಕೆ ಕೂಡ ಕಾಣದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 3. 15 ರ ಸುಮಾರಿಗೆ ಡಿ ಸುಧಾಕರ್ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಸಚಿವ ಸುಧಾಕರ್ ಅವರ ಆರೋಗ್ಯ ಸ್ಥಿತಿ ಏರುಪೇರಾಗಿತ್ತು. ಹೀಗಾಗಿ ಅವರನ್ನು ತಜ್ಞ ವೈದ್ಯರ ನಿಗಾದಲ್ಲಿ ಇರಿಸಿ ಸುದೀರ್ಘ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಕಾರಣ ಇಂದು ಮುಂಜಾನೆ ಸುಮಾರು 3:15 ಗಂಟೆಗೆ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ.
ಮೃತ ಸುಧಾಕರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯ ರಾಜಕಾರಣಿಯಾಗಿದ್ದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಸ್ತುತ ಸಚಿವ ಸಂಪುಟದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜವಾಬ್ದಾರಿಯನ್ನು ಹೊತ್ತಿದ್ದ ಅವರು, ಜನಾನುರಾಗಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ.
ಮುಖ್ಯಮಂತ್ರಿಗಳು ಸೇರಿದಂತೆ ಸಚಿವ ಸಂಪುಟದ ಸಹೋದ್ಯೋಗಿಗಳು ಮತ್ತು ವಿವಿಧ ಪಕ್ಷಗಳ ಮುಖಂಡರು ಸುಧಾಕರ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. “ಸರಳ ಸಜ್ಜನಿಕೆಯ ರಾಜಕಾರಣಿಯನ್ನು ರಾಜ್ಯ ಕಳೆದುಕೊಂಡಿದೆ” ಎಂದು ಗಣ್ಯರು ಕಂಬನಿ ಮಿಡಿದಿದ್ದಾರೆ. ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬೆಂಗಳೂರು ಮತ್ತು ಅವರ ಸ್ವಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗುತ್ತಿದ್ದು, ನಂತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು