6:42 AM Wednesday27 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಪ್ಲಾಸ್ಟಿಕ್ ಅಕ್ಕಿಯಲ್ಲ, ಸಾರವರ್ಧಿತ ಅಕ್ಕಿ: ಆಹಾರ ಇಲಾಖೆಯಿಂದ ನಾಗರಿಕರ ಗೊಂದಲ ನಿವಾರಣೆ 

08/12/2021, 08:45

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ವಿವಿಧ ನ್ಯಾಯಬೆಲೆ ಅಂಗಡಿಗಳಲ್ಲಿ  ಪ್ಲಾಸ್ಟಿಕ್ ಅಕ್ಕಿ ಕಲಬೆರಕೆ ಆಗಿದೆ ಎನ್ನುವ ಆತಂಕದ ಹಿನ್ನೆಲೆಯಲ್ಲಿ ಆಹಾರ ಮತ್ತು

ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ  ಇದು ಪ್ಲಾಸ್ಟಿಕ್ ಅಲ್ಲ ಸಾರವರ್ಧಿತ ಅಕ್ಕಿ ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.

ತಾಲೂಕಿನ  ಪರಶುರಾಂಪುರ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಣೆ ಮಾಡುತ್ತಿರುವ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣವಾಗಿದೆ ಎಂದು ಆಂತಕ ಒಬ್ಬರಿಂದ ಒಬ್ಬರಿಗೆ ಗಾಳಿ ಸುದ್ದಿ  ಹರಡುತ್ತಿದ್ದಂತೆ ಅಧಿಕಾರಿಗಳ ಗಮನ ಬಂದ ತಕ್ಷಣ ಆಹಾರ ಇಲಾಖೆಯ ಶಿರಸ್ತೆದಾರ್ ಶಿವಾಜಿ ಮಂಗಳವಾರ ಗ್ರಾಮದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ  ಅಂಗಡಿಯಲ್ಲಿನ ಅಕ್ಕಿಯನ್ನು ಪ್ರಯೋಗಾಲಯಕ್ಕೆ ಕಳಿಸಲಾಗುವುದು ಎಂದು ಅಕ್ಕಿಯನ್ನು ಸಂಗ್ರಹಿಸಿ  ಸಾರ್ವಜನಿಕರಲ್ಲಿನ ಗೊಂದಲ ನಿವಾರಣೆ ಮಾಡಿದ್ದಾರೆ.  

ಆಹಾರ ಇಲಾಖೆಯ ಶಿರಸ್ತೆದಾರ್ ಶಿವಾಜಿ ಮಾತನಾಡಿ, ರಾಜ್ಯದಲ್ಲಿ ಕೊರೊನಾ ಮೂರನೆಯ ಅಲೆ ಭೀತಿ, ಮೂರನೆಯ ಅಲೆಯು ಬಹುತೇಕ ಮಕ್ಕಳನ್ನು ಕಾಡುತ್ತಿದೆ ಎನ್ನವ ತಜ್ಞರ ವರದಿ, ಅದರಲ್ಲಿಯೂ ಅಪೌಷ್ಠಿಕ ಮಕ್ಕಳಲ್ಲಿ ಬಹುಬೇಗ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂಬ ತಜ್ಞರ ಸಲಹೆಯಂತೆ  ಅಂಗನವಾಡಿ ಹಾಗೂ ಸರಕಾರಿ ಶಾಲಾ ಮಕ್ಕಳ ಬಿಸಿಯೂಟ ತಯಾರಿಕೆಯಲ್ಲಿ ಈಗಾಗಲೆ ಸಾರವರ್ಧಿತ ಅಕ್ಕಿಯನ್ನು ಬಳಕೆ ಮಾಡುತ್ತಿದ್ದು ಯಾವ ಕಟುಂಬದಲ್ಲೂ ಅಪೌಷ್ಠಿಕತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ ಸರಕಾರ ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಣೆ ಮಾಡುತ್ತಿರುವ ಪಡಿತರ ಸಾಮಾನ್ಯ ಅಕ್ಕಿಯ ಜತೆಗೆ ಪೌಷ್ಠಿಕತೆ ಹೆಚ್ಚಿಸುವ ಸಾರವರ್ಧಿತ ಅಕ್ಕಿಯನ್ನು ಮಿಶ್ರಣ ಮಾಡಿ ವಿತರಣೆ ಮಾಡಲಾಗುತ್ತಿದೆ.

ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ವಿತರಣೆ ಮಾಡುತ್ತಿರುವ ಅಕ್ಕಿಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ ಮಾಡಿದಾಗ ಪೋಷರಲ್ಲಿ ಆತಂಕ ಮೂಡಿತ್ತು. ಈಗ ಅದು ನಿವಾರಣೆಯಾಗಿದೆ. ಅಪೌಷ್ಠಿಕತೆಯಿಂದ ಮಕ್ಕಳ ದೈಹಿಕ ಹಾಗು ಮಾನಸಿಕ ಬೆಳವಣಿಗೆ ಆಗುವುದಿಲ್ಲ, ಈ ಮಕ್ಕಳು ಸಾಕಷ್ಟು ಪ್ರಮಾಣದಲ್ಲಿ ರೋಗಕ್ಕೆ ತುತ್ತಾಗುತ್ತಾರೆ, ಇಂಥ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಬೇಕಾಗಿದೆ, ಈ ಕಾರಣಕ್ಕಾಗಿ ಕೇಂದ್ರ ಸರಕಾರ ಬಯೋಟೆಕ್ನಿಲಾಜಿ ವಿಭಾಗದಿಂದ ವಿಶೇಷವಾದ ಸಾರವರ್ಧಿತ ಅಕ್ಕಿಯನ್ನು ತಯಾರಿಸಿ ವಿತರಣೆ ಮಾಡಲಾಗುತ್ತಿದೆ.

ಶಾಲೆಯ ಶಿಕ್ಷಕರು , ಅಂಗನವಾಡಿ ಶಿಕ್ಷಕರು ಹಾಗೂ ನ್ಯಾಯ ಬೆಲೆ ಅಂಗಡಿ ಮಾಲಿಕರು ಪೋಷಕರಲ್ಲಿನ ಗೊಂದಲ ನಿವಾರಣೆಗಾಗಿ ಸಾರವರ್ಧಿತ ಅಕ್ಕಿ ಬಗ್ಗೆ ಮಾಹಿತಿ ನೀಡುವಂತೆ ಸಲಹೆ ನೀಡಿದರು.

ಫೋಟೊ ಡಿ೭-ಸಿಎಲ್‌ಕೆ೧ ಚಳ್ಳಕೆರೆ ತಾಲೂಕಿನ  ಪರಶುರಾಂಪುರ ಸೇರಿದಂತೆ ಸರಕಾರಿ ಶಾಲೆ, ಅಂಗನವಾಡಿ ಕೇಮದ್ರ ಹಾಗೂ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಣೆ ಮಾಡುತ್ತಿರುವ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣವಾಗಿದೆ ಎಂದು ಆಂತಕದಲ್ಲಿ ಒಬ್ಬರಿಂದ ಒಬ್ಬರಿಗೆ ಗಾಳಿ ಸುದ್ದಿ  ಹರಡುತ್ತಿದ್ದಂತೆ ಆಹಾರ ನಾಗರೀಕರ ಸರಬರಾಜು ಇಲಾಖೆಯ ಶಿರಸ್ತೆದಾರ್ ಶಿವಾಜಿ ಭೇಟಿ ನೀಡಿ ಸಾರ್ವಜನಿರಿಗೆ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು