ಇತ್ತೀಚಿನ ಸುದ್ದಿ
ಬೆಂಗಳೂರು – ಬೆಳಗಾವಿ ಸೇರಿದಂತೆ 3 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
10/08/2025, 13:32

ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಂಗಳೂರು – ಬೆಳಗಾವಿ ಸೇರಿದಂತೆ 3 ವಂದೇ ಭಾರತ್ ರೈಲುಗಳಿಗೆ ಗ್ರೀನ್ ಸಿಗ್ನಲ್ ಹಾಗೂ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಿದರು.
ವಂದೇ ಭಾರತ್ ಗೆ ಗ್ರೀನ್ ಸಿಗ್ನಲ್ ನೀಡಿದ ಬಳಿಕ ಪ್ರಧಾನಿ ಮತ್ತು ಗಣ್ಯರು ರಸ್ತೆ ಮಾರ್ಗವಾಗಿ ಜೆ.ಪಿ. ನಗರದ ರಾಗಿಗುಡ್ಡ ಹಳದಿ ಮೆಟ್ರೋ ನಿಲ್ದಾಣದಕ್ಕೆ ತೆರಳಿದರು.ಅಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ ನೀಡುವರು.
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ, ಸಚಿವ ದಿನೇಶ್ ಗುಂಡೂರಾವ್ ವಂದೇ ಭಾರತ್ ಚಾಲನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ಸಂದರ್ಭದಲ್ಲಿ ಅಮೃತ್‍ಸರ್ ದಿಂದ ಶ್ರ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಲಾಯಿತು.
ಬೆಂಗಳೂರಿಂದ-ಬೆಳಗಾವಿಗೆ ಕೇವಲ 8.5 ಗಂಟೆಗಳಲ್ಲಿ 611 ಕಿ.ಮೀ ದೂರವನ್ನು ಕ್ರಮಿಸಲಿದೆ. ಹಾಲಿ ಇರುವ ರೈಲಿನ ಸೇವೆಗಳಿಗಿಂತ ಬೆಂಗಳೂರಿನಿಂದ ಬೆಳಗಾವಿಗೆ 1 ಗಂಟೆ 20 ನಿಮಿಷ ಮತ್ತು ಬೆಳಗಾವಿಯಿಂದ ಬೆಂಗಳೂರಿಗೆ ಸುಮಾರು 1 ಗಂಟೆ 40 ನಿಮಿಷ ಸಮಯ ಉಳಿಸಲಿದೆ ಎಂದು ಇಲಾಖೆ ತಿಳಿಸಿದೆ.