8:15 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಕೃಷ್ಣನ ಸನ್ನಿಧಿಯಲ್ಲಿ ಪ್ರಧಾನಿ ಮೋದಿಗೆ ವೇದ ಮಂತ್ರಗಳ ಘೋಷದೊಂದಿಗೆ ಸ್ವಾಗತ: ಕನಕನ ಕಿಂಡಿ ಮೂಲಕ ವಿಠಲನ ದರ್ಶನ

28/11/2025, 12:33

ಉಡುಪಿ(reporterkarnataka.com); ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು.
ಮಂಗಲವಾದ್ಯ ಸಹಿತ ವೇದ ಮಂತ್ರಗಳ ಪಠಣದೊಂದಿಗೆ ಪ್ರಧಾನಿಯವರನ್ನು ಬರಮಾಡಿಕೊಳ್ಳಲಾಯಿತು. ರಥಬೀದಿಯಿಂದ ಶ್ರೀಕೃಷ್ಣ ಮಠದವರೆಗೂ ವೇದ ಮಂತ್ರಗಳ ನಿರಂತರ ಪಠಣ ನಡೆಯಿತು. ಪಂಚ ವಾದ್ಯಗಳ ಗಾನ ಎಲ್ಲೆಡೆ ಮೊಳಗಿತು. ನಿರ್ಧಿಷ್ಟ ಸ್ಥಳದಲ್ಲಿ ಪ್ರತ್ಯೇಕ ಗುಂಪುಗಳಿಂದ ಮಂಗಳ ವಾದ್ಯ, ವೇದ ಮಂತ್ರಗಳ ಘೋಷಣೆ ನಡೆಯಿತು.


ರಥಬೀದಿಯ ಆವರಣದಲ್ಲಿ ವಿಶೇಷ ಅಲಂಕಾರ ಮಾಡಲಾಗಿದೆ. ಕನಕನ ಗುಡಿಯನ್ನು ಹೂವಿನಿಂದ ಅಲಂಕರಿಸಲಾಗಿತ್ತು. ಕನಕನ ಕಿಂಡಿಗೆ ಕನಕ ಕವಚ ಹೊದಿಸಲಾಗಿತ್ತು. ಶ್ರೀಕೃಷ್ಣ ಮಠದ ಮುಖ್ಯದ್ವಾರ, ಗೀತ ಮಂದಿರ ಸೇರಿದಂತೆ ಎಲ್ಲಡೆ ದೀಪಾಲಂಕಾರ ಮಾಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಕನಕ ಮೂರ್ತಿಗೆ ಮಾಲಾರ್ಪಣೆ ಮಾಡಿ ಪ್ರಾರ್ಥನೆ ಸಲ್ಲಿಸಿದರು.
ಕನಕ ಕಿಂಡಿಗೆ ಜೋಡಿಸಿರುವ ಕನಕ ಕವಚವನ್ನು ಪ್ರಧಾನಿ ಉದ್ಘಾಟಿಸಿದರು. ನಂತರ ಕನಕನ ಕಿಂಡಿಯ ಮೂಲಕ ಜಗದ್ದೋದರಕನ ದರ್ಶನ ಮಾಡಿದರು. ಮಧ್ವ ಸರೋವರದಲ್ಲಿ ತೀರ್ಥ ಪ್ರೋಕ್ಷಣೆ, ಶ್ರೀಕೃಷ್ಣನ ದರ್ಶನ
ಸ್ವರ್ಣತೀರ್ಥ ಮಂಟಪ ಉದ್ಘಾಟಿಸಿದರು. ನಂತರ ಪರ್ಯಾಯ ಶ್ರೀಪಾದರ ಸಮ್ಮುಖದಲ್ಲಿ ಶ್ರೀಕೃಷ್ಣನ ಎದುರು ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕಾರ ಮಾಡಿದರು. ನಂತರ ಚಂದ್ರಶಾಲೆಗೆ ತೆರಳಿ ಅಷ್ಟ ಮಠದ ಯತಿಗಳ ಜತೆ ಚರ್ಚೆ ನಡೆಸಿದರು. ಬಳಿಕ ಮುಖ್ಯಪ್ರಾಣರ ದರ್ಶನ ನಡೆಯಿತು. ಗೀತಾ ಮಂದಿರದಲ್ಲಿ ಪರ್ಯಾಯ ಶ್ರೀಗಳ ಜತೆ ಮಾತುಕತೆ ನಡೆಸಿದರು. ಬಳಿಕ ಅನಂತಶಯನ ಮೂರ್ತಿಯ ಉದ್ಘಾಟನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು